ADVERTISEMENT

ನೇಮಕಾತಿಯಲ್ಲಿ ಕ್ರೀಡಾ ಕ್ಷೇತ್ರದ ಅಭ್ಯರ್ಥಿಗಳಿಗೆ ಶೇ 2ರಷ್ಟು ಮೀಸಲು: ರವಿಶಂಕರ್

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 3:12 IST
Last Updated 31 ಆಗಸ್ಟ್ 2025, 3:12 IST
ಕೆ.ಆರ್.ನಗರ ಶ್ರೀಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ತಾಲ್ಲೂಕಿನ ಹೊಸೂರು ಕಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ ವತಿಯಿಂದ ಈಚೆಗೆ ನಡೆದ ಅರ್ಕನಾಥ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾಸಕ ಡಿ.ರವಿಶಂಕರ್ ಅವರನ್ನು ಸನ್ಮಾನಿಸಲಾಯಿತು
ಕೆ.ಆರ್.ನಗರ ಶ್ರೀಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ತಾಲ್ಲೂಕಿನ ಹೊಸೂರು ಕಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ ವತಿಯಿಂದ ಈಚೆಗೆ ನಡೆದ ಅರ್ಕನಾಥ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾಸಕ ಡಿ.ರವಿಶಂಕರ್ ಅವರನ್ನು ಸನ್ಮಾನಿಸಲಾಯಿತು   

ಕೆ.ಆರ್.ನಗರ: ‘ನೇಮಕಾತಿ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿನ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಶೇ 2ರಷ್ಟು ಮೀಸಲು ಕಲ್ಪಿಸಿದ್ದು, ಕ್ರೀಡಾಪಟುಗಳು ಅದನ್ನು ಸದುಪಯೋಗಪಡಿಸಿಕೊಳ್ಳಬೇ’ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಇಲ್ಲಿನ ಶ್ರೀಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ತಾಲ್ಲೂಕಿನ ಹೊಸೂರು ಕಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ ವತಿಯಿಂದ ಈಚೆಗೆ ನಡೆದ ಅರ್ಕನಾಥ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.

‘ವ್ಯಾಸಂಗ ಮಾಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಜೀವನ ರೂಪಿಸಿಕೊಳ್ಳಲು ಹತ್ತಾರು ಆಯ್ಕೆ, ಅವಕಾಶಗಳು ಸಿಗುತ್ತವೆ. ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಒಂದು ಕ್ಷೇತ್ರದಲ್ಲಿ ನಿರ್ದಿಷ್ಟ ಗುರಿ, ಆಸಕ್ತಿ ಮತ್ತು ಕಠಿಣ ಪರಿಶ್ರಮ ಇದ್ದರೆ ಅಂದುಕೊಂಡ ಗುರಿ ಶೀಘ್ರ ತಲುಪಬಹುದಾಗಿದೆ. ಗುರಿ ಮತ್ತು ಛಲ ಇಟ್ಟುಕೊಂಡು ಹಗಲಿರುಳು ಶ್ರಮಿಸಿದರೆ ಉತ್ತಮ ಫಲ ಪಡೆಯಬಹುದಾಗಿದೆ. ಆಯ್ಕೆ ಮಾಡಿಕೊಂಡ ಕ್ರೀಡೆಯಲ್ಲಿ ಆಸಕ್ತಿ ಇರಬೇಕು. ಕ್ರೀಡಾ ಮನೋಭಾವ ಇಟ್ಟುಕೊಂಡು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು’ ಎಂದರು.

ADVERTISEMENT

ರಾಜ್ಯ ಕಾಂಗ್ರೆಸ್ ಎಸ್.ಟಿ ಘಟಕದ ಉಪಾಧ್ಯಕ್ಷ ಹೊಸೂರು ಕಲ್ಲಹಳ್ಳಿ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಗಂಧನಹಳ್ಳಿ ವೆಂಕಟೇಶ್, ಹಾಡ್ಯ ಮಹದೇವಸ್ವಾಮಿ, ವಕ್ತಾರ ಸಯ್ಯದ್ ಜಾಬೀರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ಕುಮಾರಸ್ವಾಮಿ, ಎಸ್ ಡಿಎಂಸಿ ಅಧ್ಯಕ್ಷ ಹರೀಶ್, ಮುಖ್ಯ ಶಿಕ್ಷಕಿ ನಂದಿನಿ, ದೈಹಿಕ ಶಿಕ್ಷಣ ಶಿಕ್ಷಕರಾದ ಜಿ.ಬಿ.ಮಂಜುನಾಥ್, ಡಿ.ಕೆ.ಜಗದೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.