ADVERTISEMENT

ನಂಜನಗೂಡು ಶ್ರೀಕಂಠೇಶ್ವರನ ಹುಂಡಿ ಎಣಿಕೆ; ₹1.8 ಕೋಟಿ ಆದಾಯ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 4:55 IST
Last Updated 17 ಜುಲೈ 2025, 4:55 IST
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದಲ್ಲಿ ಬುಧವಾರ ಕಾಣಿಕೆ ಹುಂಡಿಗಳ ಎಣಿಕೆ ನಡೆಯಿತು
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದಲ್ಲಿ ಬುಧವಾರ ಕಾಣಿಕೆ ಹುಂಡಿಗಳ ಎಣಿಕೆ ನಡೆಯಿತು   

ನಂಜನಗೂಡು: ನಗರದ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ, 78 ವಿದೇಶಿ ಕರೆನ್ಸಿಗಳು ದೊರೆತಿವೆ.

ನಗರದ ಬ್ಯಾಂಕ್ ಅಫ್ ಬರೋಡ ಸಿಬ್ಬಂದಿ, ಸ್ತ್ರಿಶಕ್ತಿ ಸಂಘದ ನೂರಕ್ಕೂ ಹೆಚ್ಚಿನ ಮಹಿಳೆಯರು ಹಾಗೂ ದೇವಾಲಯದ ಸಿಬ್ಬಂದಿ ಎಣಿಕೆ ಕಾರ್ಯಕ್ಕೆ ನೆರವಾದರು. ದೇವಾಲಯದ ಇಒ ಜಗದೀಶ್ ಕುಮಾರ್, ಧಾರ್ಮಿಕ ತಹಶೀಲ್ದಾರ್ ವಿದ್ಯುಲತಾ, ಲೆಕ್ಕಾಧಿಕಾರಿ ಗುರುಮಲ್ಲಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT