ತಿ.ನರಸೀಪುರ: 2024–25ನೇ ಸಾಲಿನ ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ಪಟ್ಟಣ ಸಮೀಪದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿರುವ ಸೆಂಟ್ ನೋರ್ಬರ್ಟ್ ಶಾಲೆಗೆ ಶೇ 100 ಫಲಿತಾಂಶ ದೊರಕಿದೆ.
ಪರೀಕ್ಷೆಗೆ ಹಾಜರಾಗಿದ್ದ 60 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 30 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 25 ಮಂದಿ ಪ್ರಥಮ ದರ್ಜೆಯಲ್ಲಿ ಹಾಗೂ ಐವರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಶಾಲೆಯ ವಿದ್ಯಾರ್ಥಿ ಎಂ.ಶಂಕರ್ ದೀಕ್ಷಿತ್ (ಶೇ 97), ಎಂ.ಮಹದೇವಪ್ರಸಾದ್(ಶೇ 94) ಹಾಗೂ ಎಫ್.ಆರ್.ಜೀವಿತಾ (ಶೇ 93) ಅಂಕ ಪಡೆದಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ– ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.