
ಮೈಸೂರು: ಅಗ್ರಹಾರದ ನೂರೊಂದು ಗಣಪತಿ ದೇವಾಲಯದ ಸಮೀಪ ಭಾನುವಾರ ದುಷ್ಕರ್ಮಿಗಳ ತಂಡದಿಂದ ಚಾಕುವಿನಿಂದ ಇರಿತಕ್ಕೊಳಗಾದ ಕೆ.ಆರ್.ಮೊಹಲ್ಲಾದ ಮೇದರಕೇರಿಯ ಕುಮಾರ್ (24) ಸೋಮವಾರ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಹಾಗೂ ಆರೋಪಿಗಳು ರಿಕ್ಷಾ ಚಾಲಕರು. ಎಂಟು ತಿಂಗಳ ಹಿಂದೆಯೇ ಇವರ ನಡುವೆ ಜಗಳವಾಗಿತ್ತು. ಅದೇ ದ್ವೇಷದ ಕಾರಣ ಹತ್ಯೆ ನಡೆದಿದೆ ಎನ್ನಲಾಗಿದೆ.
ಕುಮಾರ್ ಭಾನುವಾರ ಮಧ್ಯಾಹ್ನ ನೂರೊಂದು ಗಣಪತಿ ದೇವಾಲಯದ ಬಳಿಗೆ ಆಟೊ ಚಲಾಯಿಸಿಕೊಂಡು ಬಂದಿದ್ದರು. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ನಾಲ್ಕು ಮಂದಿ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಗಾಯಗೊಂಡ ಕುಮಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಕೃಷ್ಣರಾಜ ಠಾಣೆಯ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ವಿದ್ಯಾರಣ್ಯಪುರಂ ನಿವಾಸಿಗಳಾದ ನಾಲ್ವರನ್ನು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.