ADVERTISEMENT

ಸಂಪರ್ಕಿತರ ಪರೀಕ್ಷೆ ಕಡ್ಡಾಯಗೊಳಿಸಿ: ರೋಹಿಣಿ ಸಿಂಧೂರಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 1:54 IST
Last Updated 2 ಅಕ್ಟೋಬರ್ 2020, 1:54 IST
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ    

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಇನ್ನೂ ತೀವ್ರಗೊಳಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕೋವಿಡ್ ಕುರಿತಾದ ಎಲ್ಲಾ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಸೋಂಕಿತರ ಕುಟುಂಬದವರು ಸೇರಿ ಕನಿಷ್ಠ 10 ಪ್ರಾಥಮಿಕ ಸಂಪರ್ಕಿತರ ಪರೀಕ್ಷೆ ಕಡ್ಡಾಯವಾಗಿ ಮಾಡಬೇಕು. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ವಿವರ ಆ್ಯಪ್‌ನಲ್ಲಿ ಸರಿಯಾಗಿ ದಾಖಲಾಗುತ್ತಿಲ್ಲ. ಇದರಿಂದ ಟ್ರಾಕಿಂಗ್ ಕೆಲಸ ಆಗುತ್ತಿಲ್ಲ. ಆದ್ದರಿಂದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಡಾಟಾ ಎಂಟ್ರಿ ಸಮರ್ಪಕವಾಗಿ ಮಾಡಬೇಕು ಎಂದು ಹೇಳಿದರು.

ADVERTISEMENT

ಆ್ಯಂಟಿಜೆನ್(ಆರ್.ಎ.ಟಿ.) ಪರೀಕ್ಷೆಗೆ ಸ್ಯಾಂಪಲ್ ತೆಗೆಯುವಾಗಲೇ ಆರ್.ಟಿ-ಪಿ.ಸಿ.ಆರ್. ಪರೀಕ್ಷೆಗೆ ಬೇಕಾದ ಸ್ಯಾಂಪಲ್‌ ಕೂಡ ತೆಗೆದುಕೊಳ್ಳಬೇಕು. ಆ್ಯಂಟಿಜೆನ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಅಂಥವರ ಸ್ಯಾಂಪಲ್ ಅನ್ನು ಆರ್.ಟಿ-ಪಿ.ಸಿ.ಆರ್. ಪರೀಕ್ಷೆಗೆ ಕಳುಹಿಸಬೇಕು ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.