ADVERTISEMENT

‘ಅವೈಜ್ಞಾನಿಕ ಚರಂಡಿ ನಿರ್ಮಾಣ ನಿಲ್ಲಿಸಿ’

ಅಧಿಕಾರಿಗಳಿಗೆ ಶಾಸಕ ಹರ್ಷವರ್ಧನ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 4:42 IST
Last Updated 30 ಸೆಪ್ಟೆಂಬರ್ 2020, 4:42 IST
ನಂಜನಗೂಡಿನ ನ್ಯಾಯಾಲಯ ಬಳಿ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕ ಬಿ.ಹರ್ಷವರ್ಧನ್ ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಆದೇಶಿಸಿದರು.
ನಂಜನಗೂಡಿನ ನ್ಯಾಯಾಲಯ ಬಳಿ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕ ಬಿ.ಹರ್ಷವರ್ಧನ್ ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಆದೇಶಿಸಿದರು.   

ನಂಜನಗೂಡು: ಮೈಸೂರು- ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆಯ ನ್ಯಾಯಾಲಯ ಆವರಣ ಬಳಿ ಅವ್ಶೆಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದ ಚರಂಡಿ ಕಾಮಗಾರಿಯನ್ನು ತಕ್ಷಣವೇ ತಡೆಹಿಡಿಯುವಂತೆ ಶಾಸಕ ಬಿ.ಹರ್ಷವರ್ಧನ್ ತಾಕೀತು ಮಾಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಅವ್ಶೆಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿ, ಚರಂಡಿ ನಿರ್ಮಾಣದ ಅವಶ್ಯಕತೆಯಿಲ್ಲ ಎಂಬುದನ್ನು ಮನಗಂಡು ಕಾಮಗಾರಿಯನ್ನು ನಡೆಸದಂತೆ ಪ್ರಾಧಿಕಾರದ ಎಂಜಿನಿಯರ್ ಎ.ಕೆ.ಶರ್ಮ ಅವರಿಗೆ ಸೂಚನೆ ನೀಡಿದರು.

ನಗರದ ನ್ಯಾಯಾಲಯದ ಬಳಿಯಿಂದ ಹುಲ್ಲಹಳ್ಳಿ ವೃತ್ತದವರೆಗೆ ₹ 51 ಲಕ್ಷ ವೆಚ್ಚದಲ್ಲಿ 650 ಮೀಟರ್ ಉದ್ದದ ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ವಾಸ್ತವದಲ್ಲಿ ಇದರಿಂದ ಯಾವುದೇ ಪ್ರಯೋಜನಕ್ಕಿಂತ ಅಧ್ವಾನವೇ ಹೆಚ್ಚು ಎಂಬುದಾಗಿ ಸ್ಥಳೀಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದೆ ಹೆದ್ದಾರಿ ಪ್ರಾಧಿಕಾರ ಮಾಡಿರುವ ಹಲವು ಅವಾಂತರಗಳಿಂದ ಇಂದಿಗೂ ಜನರು ಪರಿತಪಿಸುತ್ತಿದ್ದಾರೆ. ಹೀಗಾಗಿ ಯಾವುದೇ ಯೋಜನೆ ಕಾರ್ಯಗತಗೊಳಿಸುವ ಮುನ್ನ ಸ್ಥಳೀಯ ಆಡಳಿತ ವ್ಯವಸ್ಥೆಯೊಂದಿಗೆ ಚರ್ಚಿಸಿ ಕಾಮಗಾರಿ ಕೈಗೊಂಡರೆ ಉತ್ತಮ ಎಂದು ಹೇಳಿದರು.

ADVERTISEMENT

ಅ. 2ರ ಂದು ಹೆದ್ದಾರಿ ಪ್ರಾಧಿಕಾರ ಹಾಗೂ ಸ್ಥಳೀಯ ಅಧಿಕಾರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಂಡ ಮೇಲೆ ಕಾಮಗಾರಿ ನಡೆಸಿ ಎಂದು ಶಾಸಕ ತಿಳಿಸಿದರು.

ನಗರಸಭೆ ಪೌರಾಯುಕ್ತ ಕರಿಬಸವಯ್ಯ ಮಾತನಾಡಿ, ‘ನಗರ ವ್ಯಾಪ್ತಿಯಲ್ಲಿ ಹೆದ್ದಾರಿಯಲ್ಲಿ ಇಂದಿಗೂ ಬೀದಿದೀಪಗಳು ಉರಿಯುತ್ತಿಲ್ಲ. ಈ ಬಗ್ಗೆ ಅನೇಕ ಬಾರಿ ಮನವಿ ಮಾಡಿದರೂ ಪ್ರಾಧಿಕಾರದ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ತಾಲ್ಲೂಕು ಆಡಳಿತ, ನಗರಸಭೆಗಳ ಗಮನಕ್ಕೆ ತರದೇ ಚರಂಡಿ ನಿರ್ಮಾಣ ಮಾಡಿ, ನಗರಸಭೆಯ ಹಳೆಯ ಚರಂಡಿ ಮಾರ್ಗಕ್ಕೆ ಸಂಪರ್ಕ ಒದಗಿಸಿದರೆ ಓವರ್ ಫ್ಲೋ ಆಗಿ ಬಡಾವಣೆಗಳ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ’ ಎಂದು ಹೇಳಿದರು.

ತಹಶೀಲ್ದಾರ್ ಕೆ.ಎಂ.ಮಹೇಶ್‌ಕುಮಾರ್, ತಾ.ಪಂ ಇಒ ಶ್ರೀಕಂಠರಾಜೇಅರಸ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಮಹೇಶ್, ಪ್ರಧಾನ ಕಾರ್ಯದರ್ಶಿ ಧನರಾಜ್ ಬೂಲ, ನವೀನ್‌ರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.