ADVERTISEMENT

ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ: ಮಾಲತಿಪ್ರಿಯಾ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 14:09 IST
Last Updated 19 ಜೂನ್ 2025, 14:09 IST
ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಾರಾಜ ಕಾಲೇಜಿನ ಹೊಸ ಕಟ್ಟಡದ ಎದುರು ಗುರುವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕ ಕೆ. ಹರೀಶ್‌ ಗೌಡ ಚಾಲನೆ ನೀಡಿದರು
ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಾರಾಜ ಕಾಲೇಜಿನ ಹೊಸ ಕಟ್ಟಡದ ಎದುರು ಗುರುವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕ ಕೆ. ಹರೀಶ್‌ ಗೌಡ ಚಾಲನೆ ನೀಡಿದರು   

ಮೈಸೂರು: ‘ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು’ ಎಂದು ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಎಂ. ಮಾಲತಿಪ್ರಿಯಾ ಹೇಳಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆ ಹಾಗೂ ನವ ವಿಶ್ವಮಾನವ ಟ್ರಸ್ಟ್‌ ವತಿಯಿಂದ ಮಹಾರಾಜ ಕಾಲೇಜು ಹೊಸ ಕಟ್ಟಡದ ಎದುರು ಗುರುವಾರ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗಿದ್ದು, ಇದು ಕಟ್ಟುನಿಟ್ಟಾಗಿ ಜಾರಿಯಾಗಬೇಕು. ಪ್ಲಾಸ್ಟಿಕ್ ಬಾಟಲಿಗಳ ಬದಲಿಗೆ ಗಾಜಿನ ಬಾಟಲಿಗಳನ್ನು ಬಳಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಶಾಸಕ ಕೆ.ಹರೀಶ್‌ಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಿಸಿಪಿ ಕೆ.ಎಸ್‌. ಸುಂದರರಾಜ್‌, ಮೈಸೂರು ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಕೆ.ಎಸ್‌. ರೇಖಾ, ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌, ಸಿಂಡಿಕೇಟ್‌ ಸದಸ್ಯರಾದ ಗೋಕುಲ್‌ ಗೋವರ್ಧನ್‌, ಜೆ. ಶಿಲ್ಪಾ, ಮಾಜಿ ಸದಸ್ಯ ಈ.ಸಿ. ನಿಂಗರಾಜ್‌ ಗೌಡ, ವಿ.ವಿ ತೋಟಗಾರಿಕೆ ಉಪ ನಿರ್ದೇಶಕ ಎನ್‌. ಚೆಲುವೇಶ್‌, ಮೈಸೂರು ವಕೀಲರ ಸಂಘದ ಮಾಜಿ ಕಾರ್ಯದರ್ಶಿ ಎಸ್‌. ಉಮೇಶ್‌ ಮುಖ್ಯ ಅತಿಥಿಗಳಾಗಿದ್ದರು.

ವೇದಿಕೆ ಅಧ್ಯಕ್ಷ ಆರ್‌. ವಾಸುದೇವ, ನವೀನ್‌ ಕುಮಾರ್‌, ದಿವಾಕರ್‌ ಚಾಂಡಿ, ಬಿ.ಎಸ್‌. ದಿನಮಣಿ, ಭಾಸ್ಕರ್‌, ಗಣೇಶ್‌, ಮಧುಸೂದನ್‌, ಚಿದಾನಂದ, ಅಭಿಷೇಕ್‌, ರಿಷಿರಾಜ್‌, ಮಂಜುನಾಥ್‌, ಹರೀಶ್‌, ಉಮಾಶಂಕರ್‌, ಸುರೇಶ್‌, ಯೋಗಿತ್, ರವಿಕುಮಾರ್‌, ಶ್ರೇಯಸ್‌ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.