ಮೈಸೂರು: ‘ಕ್ರೀಡೆಯಲ್ಲಿ ಗೆಲುವು ಮತ್ತು ಕೀರ್ತಿ ಸಿಗಲು ವಿದ್ಯಾರ್ಥಿಗಳಲ್ಲಿ ಶ್ರದ್ಥೆ ಹಾಗೂ ನಿರಂತರ ಪ್ರಯತ್ನ ಅಗತ್ಯವಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ಪ್ರೇಮ್ ಕುಮಾರ್ ಹೇಳಿದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಇಲ್ಲಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ವಸತಿ ಶಾಲೆ, ಕಾಲೇಜು ವಿದ್ಯಾರ್ಥಿಗಳ ಹಾಗೂ ನೌಕರರ ವಿಭಾಗ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
‘ದೇಶದಲ್ಲಿ ಯುವಜನರ ಸಂಖ್ಯೆ ಹೆಚ್ಚಿದೆ. ಯುವಕ, ಯುವತಿಯರು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಹಾಗಾದಾಗ ನಮ್ಮ ನಾಡಿನ ಮತ್ತಷ್ಟು ಪ್ರತಿಭೆಗಳು ಬೆಳೆಯಲು ಸಾಧ್ಯವಾಗುತ್ತದೆ’ ಎಂದರು.
ನಗರಪಾಲಿಕೆಯ ಹೆಚ್ಚುವರಿ ಆಯುಕ್ತ ಜಿ.ಎಸ್.ಸೋಮಶೇಖರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎನ್.ಮುನಿರಾಜು, ಅಂತರರಾಷ್ಟ್ರೀಯ ಕ್ರೀಡಾಪಟು ಧನುಷಾ, ಜಿಲ್ಲಾ ಸಮನ್ವಯ ಅಧಿಕಾರಿ ಹೇಮ್‌ಕುಮಾರ್, ಗಣಪತಿ ಜಕಾತಿ, ಆಶಾ ಟಿ.ಜಿ., ಗಣೇಶ್, ಯೋಗೀಶ್, ಇದ್ದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಎಚ್.ಎನ್.ಪ್ರಸನ್ನಕುಮಾರ್ ಸ್ವಾಗತಿಸಿದರು. ಎನ್.ಎಸ್.ಪದ್ಮಾ ನಿರೂಪಿಸಿದರು. ಮಲ್ಲಿಕಾರ್ಜುನ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.