ADVERTISEMENT

ತಿಪಟೂರು| ಮೆದುಳು ಜ್ವರದ ಲಸಿಕೆ ಪಡೆದ ವಿದ್ಯಾರ್ಥಿಗಳು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 10:32 IST
Last Updated 8 ಡಿಸೆಂಬರ್ 2022, 10:32 IST
ಆಸ್ಪತ್ರೆಯಲ್ಲಿ ಚಿಕಿತ್ಸೆಯ ವಿದ್ಯಾರ್ಥಿಗಳು
ಆಸ್ಪತ್ರೆಯಲ್ಲಿ ಚಿಕಿತ್ಸೆಯ ವಿದ್ಯಾರ್ಥಿಗಳು    

ತಿಪಟೂರು: ಮೆದುಳು ಜ್ವರದ ಲಸಿಕೆ ಪಡೆದ ಹತ್ತು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಲ್ಲೂಕಿನ ಕಸಬಾ ಹೋಬಳಿಯ ಗೌಡನಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮೆದುಳು ಜ್ವರದ ಲಸಿಕೆ ನೀಡಿದ್ದು, 8 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಇದೇ ರೀತಿ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಲಸಿಕೆ ಪಡೆದುಕೊಂಡ ನಂತರ ಅಸ್ವಸ್ಥಗೊಂಡಿದ್ದಾರೆ. ಇವರನ್ನು ಸಹ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ADVERTISEMENT

ಮಕ್ಕಳಿಗೆ ಸ್ವಲ್ಪ ಮಟ್ಟಿಗೆ ಸುಸ್ತು ಕಾಣಿಸಿಕೊಂಡಿದೆ. ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.