ADVERTISEMENT

ಮೀನುಗಾರಿಕೆಗೆ ಸಹಾಯಧನ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 4:07 IST
Last Updated 21 ಜುಲೈ 2020, 4:07 IST

ಮೈಸೂರು: ಮೀನುಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದಂತೆ ಹಲವಾರು ಉಪ ಯೋಜನೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ ವಿಳಾಸ https://www.fisheries.karnataka.gov.in ರಲ್ಲಿ ವಿವರವನ್ನು ಪಡೆಯಬಹುದಾಗಿದೆ. ಅಥವಾ ಮೀನುಗಾರಿಕೆ ಸಹಾಯಕ ನಿರ್ದೇಶಕ ಕಚೇರಿಗಳಾದ ಮೈಸೂರು-9480823023, 9448500695 ನಂಜನಗೂಡು-9731357199, ತಿ.ನರಸೀಪುರ-9448273093.

ಹುಣಸೂರು-7349432753, ಪಿರಿಯಾಪಟ್ಟಣ-7829028415, ಎಚ್.ಡಿ.ಕೋಟೆ-9448502697, ಕೆ.ಆರ್.ನಗರ- 9740909438 ಮತ್ತು ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಮೈಸೂರು-9880923401 ಸಂಪರ್ಕಿಸಿ.

ADVERTISEMENT

ಆಗಸ್ಟ್ 8 ಅರ್ಜಿ ಸಲ್ಲಿಸುವ ಕೊನೆ ದಿನ ಎಂದು ಜಿಲ್ಲಾ ಪಂಚಾಯಿತಿಯ ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹರಿಂದ ಅರ್ಜಿ ಆಹ್ವಾನ

ಮೈಸೂರು: 2021ನೇ ಸಾಲಿನ ಪದ್ಮ ಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠತೆ ಗಳಿಸಿ, ಅಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳಿಗೆ ನೀಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಸಂಬಂಧ ಅರ್ಹ ವ್ಯಕ್ತಿಗಳಿಂದ ನಿಗದಿತ ನಮೂನೆಯಲ್ಲಿ ನಾಮ ನಿರ್ದೇಶನ ಆಹ್ವಾನಿಸಲಾಗಿದೆ.

ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ, ತಾಂತ್ರಿಕ, ತಂತ್ರಜ್ಞಾನ ಮತ್ತು ಇತರೆ ಗೌರವಾನ್ವಿತ ವ್ಯಕ್ತಿ, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ನಾಗರಿಕ ಸೇವೆ, ಕ್ರೀಡೆ, ಅಥ್ಲೆಟಿಕ್ಸ್, ಸಾಹಸ ಕ್ರೀಡೆ ಮತ್ತು ಯೋಗ, ಮಾನವ ಹಕ್ಕುಗಳ ಸಂರಕ್ಷಣೆ, ಭಾರತ ಸಂಸ್ಕೃತಿಯ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ವನ್ಯಮೃಗ ಸಂರಕ್ಷಣೆ ಒಳಗೊಂಡ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿಗಳು ಮೈಸೂರು ಜಿಲ್ಲಾ ತಾಣ https://mysore.nic.in ನಲ್ಲಿ ನಮೂನೆಯನ್ನು ಡೌನ್‍ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ, ಸಾಧನೆಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಜುಲೈ 24ರೊಳಗೆ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.