ADVERTISEMENT

ಸುಧಾ ಮೂರ್ತಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 8:29 IST
Last Updated 16 ಅಕ್ಟೋಬರ್ 2020, 8:29 IST
ಸುಧಾ ಮೂರ್ತಿ
ಸುಧಾ ಮೂರ್ತಿ   

ಮೈಸೂರು: ಇನ್ಫೊಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.

ಅ.19 ರಂದು ನಡೆಯಲಿರುವ 100ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

'ಸಮಿತಿಯು ಗೌರವ ಡಾಕ್ಟರೇಟ್ ಪದವಿಗೆ ಮೂವರ ಹೆಸರನ್ನು ರಾಜ್ಯಪಾಲರಿಗೆ ಕಳುಹಿಸಿತ್ತು.‌ ಅದರಲ್ಲಿ ಸುಧಾಮೂರ್ತಿ ಅವರಿಗೆ ಡಾಕ್ಟರೇಟ್ ನೀಡಲು ಒಪ್ಪಿಗೆ ಸೂಚಿಸಿದ್ದಾರೆ' ಎಂದರು.

ADVERTISEMENT

ಘಟಿಕೋತ್ಸವವನ್ನು ಬೆಳಿಗ್ಗೆ 10.30ಕ್ಕೆ ಕ್ರಾಫರ್ಡ್ ಭವನದಲ್ಲಿ ಏರ್ಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆ ಮೂಲಕ ಘಟಿಕೋತ್ಸವ ಭಾಷಣವನ್ನು ಮಾಡಲಿದ್ದು, ರಾಜ್ಯಪಾಲ ವಜುಭಾಯಿವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.