ಮೈಸೂರು: ಮೈಸೂರು ನಗರ ಪೊಲೀಸ್ ಅಪರಾಧ ಮತ್ತು ಸಂಚಾರ ವಿಭಾಗದ ನೂತನ ಡಿಸಿಪಿಯಾಗಿ ಸುಂದರ್ ರಾಜ್ ಗುರುವಾರ ಅಧಿಕಾರ ಸ್ವೀಕರಿಸಿದರು.
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರನ್ನು ಭೇಟಿಯಾದ ಬಳಿಕ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದೆ ಸುಂದರ್ ರಾಜ್ ಕೊಡಗು ಜಿಲ್ಲೆಯ ಹೆಚ್ಚುವರಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೈಸೂರು ಜಿಲ್ಲೆಯ ಹುಣಸೂರು ಡಿವೈಎಸ್ಪಿಯಾಗಿ, ಮೈಸೂರು, ಚಾಮರಾಜನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ ಅನುಭವವಿದೆ.
ಸಿಎಎಆರ್ ಡಿಸಿಪಿ ವರ್ಗಾವಣೆ: ಮೈಸೂರು ನಗರ ಸಶಸ್ತ್ರ ಮೀಸಲು ಪಡೆಯ (ಸಿಎಆರ್) ನೂತನ ಡಿಸಿಪಿಯಾಗಿ ಸಿದ್ದನಗೌಡ ವೈ. ಪಾಟೀಲ ಅವರನ್ನು ಸರ್ಕಾರ ನಿಯೋಜಿಸಿದೆ.
ಸಿದ್ದನಗೌಡ ಅವರು ಬೆಳಗಾವಿ ನಗರ ಸಿಎಆರ್ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೈಸೂರಿನ ಸಿಎಆರ್ ಡಿಸಿಪಿ ಎ. ಮಾರುತಿ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಡಿಜಿಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಇಲಾಖೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.