ಮೈಸೂರು: ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಕಾರ್ತಿಕ್‌ನ್ನು ಸಿದ್ದಲಿಂಗಪುರಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ ಮೇಟಗಳ್ಳಿ ಬಳಿ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.
‘ಪ್ರಕರಣ ನಡೆದ ಸ್ಥಳದಲ್ಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಕಾರ್ತಿಕ್ ಬೆನ್ನು ಹತ್ತಲಾಗಿದ್ದು, ಕೊಳ್ಳೇಗಾಲದಲ್ಲಿ ವಶಕ್ಕೆ ಪಡೆಯಲಾಗಿತ್ತು. ಮೈಸೂರಿನಲ್ಲಿ ವಿಚಾರಣೆ ನಡೆಸಿ ಸಿದ್ದಲಿಂಗಪುರದ ಆತನ ಮನೆಗೆ ಕರೆದುಕೊಂಡು ಹೋಗಿದ್ದು ವಾಪಸ್ ಬರುವಾಗ ಮೇಟಗಳ್ಳಿ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ. ಆತನ ಬಲಗಾಲಿನ ತೊಡೆಗೆ ಗುಂಡು ಹಾರಿಸಲಾಗಿದ್ದು, ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿದೆ. ಇಬ್ಬರು ಪೊಲೀಸರಿಗೂ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.