ADVERTISEMENT

ಸುತ್ತೂರು ಶಾಲೆ, ಉಚಿತ ಹಾಸ್ಟೆಲ್‌ ಪ್ರವೇಶಕ್ಕೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2025, 0:24 IST
Last Updated 30 ಮಾರ್ಚ್ 2025, 0:24 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದ ಜೆಎಸ್‌ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯಕ್ಕೆ 2025–26ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ADVERTISEMENT

ಕನ್ನಡ ಮಾಧ್ಯಮದ 1ರಿಂದ 8ನೇ ತರಗತಿ ಮತ್ತು ಇಂಗ್ಲಿಷ್ ಮಾಧ್ಯಮದ 1, 5, 6 ಹಾಗೂ 8ನೇ ತರಗತಿಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಗ್ರಾಮೀಣ ಪ್ರದೇಶದ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ, ಬಾಲಕಿಯರಿಗೆ ಪ್ರವೇಶ ನೀಡಲಾಗುವುದು.

ಅರ್ಜಿ ನಮೂನೆಯನ್ನು ಏಪ್ರಿಲ್‌ 2ರಿಂದ ಶಾಲೆ, ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ https://jssschoolsuttur.org/ ಜಾಲತಾಣದಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ– ‘ಆಡಳಿತಾಧಿಕಾರಿ, ಜೆಎಸ್‌ಎಸ್ ಸಂಸ್ಥೆಗಳು, ಸುತ್ತೂರು, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ– 571129’ ವಿಳಾಸಕ್ಕೆ ಮೇ 15ರೊಳಗೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 74114 86938 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.