
ಮೈಸೂರು: ಸ್ವಚ್ಛ ಸರ್ವೇಕ್ಷಣ 2025-26ರ ಅಂಗವಾಗಿ ಮಹಾನಗರಪಾಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಪರಿಸರ ಜಾಗೃತಿ ಹಾಗೂ ನಾಗರಿಕ ಜವಾಬ್ದಾರಿ ಪ್ರಜ್ಞೆ ಉತ್ತೇಜಿಸುವ ಉದ್ದೇಶದಿಂದ ಜ.31ರಂದು ಬೆಳಿಗ್ಗೆ 10ಕ್ಕೆ ಇಲ್ಲಿನ ವಿನೋಬಾ ರಸ್ತೆಯ ಕಲಾಮಂದಿರದಲ್ಲಿ ‘ಸ್ವಚ್ಛ ಮೈಸೂರು ರಸಪ್ರಶ್ನೆ’ ಕಾರ್ಯಕ್ರಮ ಆಯೋಜಿಸಲಾಗಿದೆ.
7ರಿಂದ 9ನೇ ತರಗತಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು.
ನಗರ ಪಾಲಿಕೆ, ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಮೈಸೂರು ವಿಶ್ವವಿದ್ಯಾಲಯ ಹಾಗೂ ಎಕ್ಸೆಲ್ ಪಬ್ಲಿಕ್ ಶಾಲೆ ಸಹಯೋಗದಲ್ಲಿ ನಡೆಸಲಾಗುತ್ತಿದೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಶಾಲೆ/ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳ ಒಂದು ತಂಡ ಭಾಗವಹಿಸಬಹುದಾಗದೆ.
ಸ್ವಚ್ಛ ಭಾರತ ಮಿಷನ್, ಘನತ್ಯಾಜ್ಯ ನಿರ್ವಹಣೆ, ಪರಿಸರ ಸಂರಕ್ಷಣೆ, ಬಳಕೆಯ ನೀರಿನ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಉಪಕ್ರಮಗಳು ರಸಪ್ರಶ್ನೆಯ ವಿಷಯಗಳಾಗಿವೆ. ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ನೀಡಲಾಗುವುದು. ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣಪತ್ರವನ್ನು ವಿತರಿಸಲಾಸಗುವುದು.
ಒಂದು ಶಾಲೆ/ಕಾಲೇಜಿನಿಂದ ಒಂದು ತಂಡಕ್ಕೆ ಮಾತ್ರ ಅವಕಾಶ. ಜ.25ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 90367 16494/ 77609 54056 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.