ADVERTISEMENT

ಒಳಚರಂಡಿ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸ್ವಾಮೀಜಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 10:55 IST
Last Updated 9 ಜನವರಿ 2021, 10:55 IST
ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರನ್ನು ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಮೈಸೂರಿನ ಶ್ರೀಕೃಷ್ಣಧಾಮದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕ ಎಲ್.ನಾಗೇಂದ್ರ ಇದ್ದಾರೆ.
ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರನ್ನು ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಮೈಸೂರಿನ ಶ್ರೀಕೃಷ್ಣಧಾಮದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕ ಎಲ್.ನಾಗೇಂದ್ರ ಇದ್ದಾರೆ.   

ಮೈಸೂರು: ಒಳಚರಂಡಿ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಹೇಳಿದರು.

ಇಲ್ಲಿನ ಶ್ರೀಕೃಷ್ಣಧಾಮದಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಅವರೊಂದಿಗೆ ಸುಮಾರು 15 ನಿಮಿಷಗಳ ಕಾಲ ಈ ವಿಷಯ ಕುರಿತು ಚರ್ಚೆ ನಡೆಸಿದರು.

ಈ ಕುರಿತು ಚಾಮುಂಡೇಶ್ವರಿ ಗೆಳೆಯರ ಪ್ರಗತಿಪರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜಿ.ಶ್ರೀನಿವಾಸ್ ಅವರು ನೀಡಿದ ಮನವಿಪತ್ರವನ್ನು ಸ್ವಾಮೀಜಿ ಸಚಿವರಿಗೆ ಕೊಟ್ಟು, ಶೀಘ್ರದಲ್ಲಿ ಕಾಯಂಗೊಳಿಸಲು ಪ್ರಯತ್ನಿಸಬೇಕು ಎಂದರು.

ADVERTISEMENT

ಪೌರಕಾರ್ಮಿಕರು ವಾಸಿಸುತ್ತಿರುವ ಕೊಳಗೇರಿ ನಿರ್ಮೂಲನಾ ಮಂಡಳಿಯ ಮನೆಗಳಿಗೆ ಖಾತೆ ಮತ್ತು ಕಂದಾಯ ಮಾಡಿಕೊಡಬೇಕೆಂದು ಈ ಸಮಯದಲ್ಲಿ ಸ್ವಾಮೀಜಿ ಗಮನ ಸೆಳೆದರು.

ಖಾತೆ ಮತ್ತು ಕಂದಾಯ ಇಲ್ಲದೇ ಬ್ಯಾಂಕ್ ಸಾಲ ಸಿಕ್ಕುತ್ತಿಲ್ಲ. ಇದರಿಂದ ಪೌರಕಾರ್ಮಿಕರಿಗೆ ತೊಂದರೆಯಾಗಿದೆ. ಶೀಘ್ರದಲ್ಲಿ ಈ ಸಮಸ್ಯೆ ಬಗೆಹರಿಸುವಂತೆ ಶ್ರೀನಿವಾಸ್ ಮನವಿ ಮಾಡಿದರು.

ಮನವಿ ಪತ್ರಗಳನ್ನು ಸ್ವೀಕರಿಸಿದ ಸಚಿವ ಸೋಮಶೇಖರ್ ಈ ಕುರಿತು ಗಮನ ಹರಿಸುವುದಾಗಿ ಭರವಸೆ ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕ ಎಲ್.ನಾಗೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.