ADVERTISEMENT

ತಿ.ನರಸೀಪುರ | ಸರ್ಕಾರಿ ಬಸ್ ಡಿಕ್ಕಿ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 2:03 IST
Last Updated 16 ಸೆಪ್ಟೆಂಬರ್ 2025, 2:03 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ತಿ.ನರಸೀಪುರ: ರಸ್ತೆ ದಾಟುತ್ತಿದ್ದ ರೈತನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ಮಾಡ್ರಳ್ಳಿ ಗೇಟ್ ಬಳಿ ನಡೆದಿದೆ.

ಗ್ರಾಮದ ಲೇಟ್ ಮಹದೇವಯ್ಯ ಎಂಬುವರ ಪುತ್ರ ಕುಮಾರ್ (37) ಮೃತಪಟ್ಟ ವ್ಯಕ್ತಿ. ಜಮೀನಿನಲ್ಲಿ ಜಾನುವಾರು ಮೇಯಿಸಿಕೊಂಡು ಮನೆಗೆ ಹಿಂದಿರುಗುವ ವೇಳೆ ಕೊಳ್ಳೇಗಾಲ ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ.

ADVERTISEMENT

ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಬಸ್‌ನ ಅತೀ ವೇಗ ಸಂಚಾರದಿಂದ ಘಟನೆ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲ ಕಾಲ ಸಂಚಾರಕ್ಕೆ ಅಡ್ಡಿಯಾಯಿತು.

ಸ್ಥಳಕ್ಕೆ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಕಲಾಶ್ರೀ ಮೋಹನ್, ಎಎಸ್‌ಪಿ ಮಲ್ಲಿಕಾ, ಡಿವೈಎಸ್‌ಪಿ ಜಿ.ಎಸ್.ರಘು, ಸರ್ಕಲ್ ಇನ್ ಸ್ಪೆಕ್ಟರ್ ಧನಂಜಯ, ಸಬ್ ಇನ್ ಸ್ಪೆಕ್ಟರ್ ಜಗದೀಶ್ ಧೂಳ್ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.