ಎಚ್.ಡಿ.ಕೋಟೆ: ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣ ಪರಿಪೂರ್ಣವಾಗಬೇಕಾದರೆ, ಕ್ರೀಡೆಯಲ್ಲಿ ಸಾಧನೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜು ಹೇಳಿದರು.
ಪಟ್ಟಣದ ತಾರಕ ವಿದ್ಯಾಸಂಸ್ಥೆ ಆವರಣದಲ್ಲಿ ಈಚೆಗೆ ನಡೆದ ತಾಲ್ಲೂಕಿನ ಅಂತರಸಂತೆ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತಾಡಿದರು.
‘ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಬೇಕಿದೆ. ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಇರಬೇಕಾದರೆ ಕ್ರೀಡಾ ಚಟುವಟಿಕೆಗಳು ಅತಿ ಮುಖ್ಯ’ ಎಂದರು.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ‘ಉತ್ತಮ ಆರೋಗ್ಯ ಹೊಂದಲು ಕ್ರೀಡೆ ಅಗತ್ಯವಿದೆ. ಶಿಕ್ಷಣದ ಜೊತೆಗೆ ಕ್ರೀಡೆಯನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡಾಗ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಅವಕಾಶವಾಗಲಿದೆ’ ಎಂದರು.
ತಾರಕ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಂದ್ರ ಡಿ.ಗೌಡ, ಸಂಸ್ಥೆಯ ಕಾರ್ಯದರ್ಶಿ ಸಿ.ವಿ.ನಾಗರಾಜು ಮಾತನಾಡಿದರು.
ದಾಸೇಗೌಡ, ತಾರಕ ವಿದ್ಯಾಸಂಸ್ಥೆಯ ಸದಸ್ಯರಾದ ಮಾದೇವಗೌಡ, ಲಕ್ಷ್ಮೀನರಸಿಂಹ, ಪಟೇಲ್ ರಾಜೇಗೌಡ, ಚೇತನ್, ಮುಖಂಡರಾದ ಶ್ರೀರಾಮ ಪ್ರಸಾದ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಾಗೇಂದ್ರ, ಎಲ್.ತಾರಕ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಅಶೋಕ, ತಾಲ್ಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಗದೀಶ್, ಕಾರ್ಯದರ್ಶಿ ಪ್ರಕಾಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಲಿಂಗರಾಜು, ಯಶವಂತ, ಅಂತರಸಂತೆ ಹೋಬಳಿಯ ಶಿಕ್ಷಣ ಸಂಯೋಜಕ ನಂಜರಾಜ, ನಾಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದ್ರಮ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.