ತಲಕಾಡು: ತಲಕಾಡಿಗೆ ಬಸ್ ನಿಲ್ದಾಣ ಹಾಗೂ ಹೆಚ್ಚಿನ ಬಸ್ ಸೇವೆ ಒದಗಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ (ಕೆಎಸ್‌ಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬು ಕುಮಾರ್ ಅವರಿಗೆ ತಲಕಾಡು ಗ್ರಾಮಸ್ಥರು ಮನವಿ ಸಲ್ಲಿಸಿದರು.
ಇಲ್ಲಿನ ವೈದ್ಯನಾಥೇಶ್ವರನ ದೇವಾಲಯಕ್ಕೆ ಗುರುವಾರ ಅವರು ಭೇಟಿ ನೀಡಿದ್ದರು. ಈ ವೇಳೆ ಗ್ರಾಮಸ್ಥರು ತಲಕಾಡಿನಿಂದ ಮೈಸೂರು, ಬೆಂಗಳೂರು ಭಾಗಕ್ಕೆ ಹಾಗೂ ಕೊಳ್ಳೇಗಾಲಕ್ಕೆ ದಾಸನಪುರದ ಮಾರ್ಗವಾಗಿ ಹೋಗಲು ಸಾರಿಗೆ ಬಸ್‌ಗಳ ಅವಶ್ಯಕತೆ ಇದೆ. ಸಾರ್ವಜನಿಕರು, ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರಿಗೆ ಅನುಕೂಲವಾಗುತ್ತದೆ’ ಎಂದರು.
‘ಗ್ರಾಮವು ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಇಲ್ಲಿ ಹೋಬಳಿ ಮಟ್ಟದ ಬಸ್ ನಿಲ್ದಾಣ ನಿರ್ಮಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೆಂಕಟೇಶ್ ವಿನಾಯಕ್, ಸಾರ್ವಜನಿಕ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷ ನರೇಂದ್ರ, ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀನಿವಾಸರಾವ್, ಮುಖಂಡ ಸುಂದರ್ ರಾಜ್ ಮನವಿ ಮಾಡಿದರು.
ಮನವಿಯನ್ನು ಸ್ವೀಕರಿಸಿದ ಅನ್ಬು ಕುಮಾರ್, ಸಾರ್ವಜನಿಕರ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ಸೇವೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್, ಗ್ರಾಮಸ್ಥರಾದ ಸೋಮಶೇಖರ್, ಮೋಹನ್ ಕುಮಾರ್, ಶಂಕರ್, ದೇವಾಲಯದ ಸಿಬ್ಬಂದಿ ಶಾನಭೋಗ ರವಿಶಂಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಮಲ್ಲು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.