ADVERTISEMENT

ಮೈಸೂರು: ಎಚ್.ಸಿ. ಮಹದೇವಪ್ಪಗೆ ಅಪಮಾನ; ತಮಟೆ ಚಳವಳಿ 27ರಂದು

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 4:29 IST
Last Updated 25 ಅಕ್ಟೋಬರ್ 2025, 4:29 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

ಮೈಸೂರು: ‘ತಿ. ನರಸೀಪುರದಲ್ಲಿ ನಡೆದ ಒಳ ಮೀಸಲಾತಿ ಕುರಿತ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಅಪಮಾನಿಸಿರುವ ಆರ್. ಭಾಸ್ಕರ್ ಪ್ರಸಾದ್ ಹಾಗೂ ಅರುಣ್‌ಕುಮಾರ್ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಅ.27ರಂದು ಬೆಳಿಗ್ಗೆ 11ಕ್ಕೆ ಎಸ್‌ಪಿ ಕಚೇರಿ ಬಳಿ ದಲಿತ ಮಹಾಸಭಾ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ’ ಎಂದು ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು.

ADVERTISEMENT

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ಇಬ್ಬರನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಒತ್ತಾಯಿಸಲಾಗುವುದು. ಒಳ ಮೀಸಲಾತಿಯಲ್ಲಿ ಅನ್ಯಾಯವಾಗಿದ್ದರೆ ಸರ್ಕಾರದ ಮುಂದೆ ಹಾಗೂ ನ್ಯಾಯಾಲಯದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಆದರೆ ಇವರು ಬಿಜೆಪಿ ಕುತಂತ್ರಕ್ಕೆ ಒಳಗಾಗಿ ಮಹದೇವಪ್ಪ ಹಾಗೂ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿರಿಸಿಕೊಂಡಿದ್ದಾರೆ. ಮೈಸೂರು ಭಾಗದ ವಾತಾವರಣ ಕಲುಷಿತಗೊಳಿಸುತ್ತಿದ್ದು, ಜಾತಿಗಳ ನಡುವೆ ದ್ವೇಷ ಬಿತ್ತುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾಸಭಾ ಮುಖಂಡ ದಲಿತ ಮಹಾಸಭಾ ಅಧ್ಯಕ್ಷ ಎಸ್.ರಾಜೇಶ್, ಮಹೇಶ್ ಅಶೋಕಪುರಂ, ಉಪ್ಪಾರ ಸಮಾಜದ ಅಧ್ಯಕ್ಷ ಯೋಗೇಶ್ ಉಪ್ಪಾರ್, ಸೈಯದ್ ಫಾರೂಕ್, ಲೋಕೇಶ್ ಮಾದಾಪುರ, ಗುರುದೇವ ರಾಮಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.