
ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನ ಗಾಂಧಿ ಚೌಕ ಬಳಿ ಪತ್ರ ಚಳುವಳಿ ನಡೆಸಿದರು
ಪ್ರಜಾವಾಣಿ ಚಿತ್ರ
ಮೈಸೂರು: ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನ ಗಾಂಧಿ ಚೌಕ ಬಳಿ ಪತ್ರ ಚಳುವಳಿ ನಡೆಸಿದರು.
ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಎಸ್.ರಾಜೇಶ ಮಾತನಾಡಿ, ‘6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ತನ್ವೀರ್ ಸೇಠ್ ಎನ್.ಆರ್. ಕ್ಷೇತ್ರದಲ್ಲಿ ಜನರ ಪರವಾಗಿ ಕೆಲಸ ಮಾಡುತ್ತಿದ್ದು, ಕೋಮು ಸಂಘರ್ಷಕ್ಕೆ ಅವಕಾಶ ನೀಡದೆ ಆಡಳಿತ ನಡೆಸುತ್ತಿದ್ದಾರೆ. ವಸತಿ ನಿಲಯಗಳು, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕೆ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಎಲ್ಲಾ ಮಾನದಂಡಗಳ ಮೇಲೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪತ್ರದ ಮೂಲಕ ಕಾಂಗ್ರೆಸ್ ಹೈಕಮಾಂಡ್ ಅನ್ನು ಆಗ್ರಹಿಸುತ್ತೇವೆ’ ಎಂದು ತಿಳಿಸಿದರು.
ನಗರಪಾಲಿಕೆ ಮಾಜಿ ಸದಸ್ಯ ಪ್ರದೀಪ್ ಚಂದ್ರು, ಸತ್ಯರಾಜ್, ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರತಾಪ್, ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಾಸೂಲ್, ಹಿರಿಯ ಉಪಾಧ್ಯಕ್ಷ ರಾಮು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.