
ಮೈಸೂರು: ‘ಅಧಿಕಾರ ಯಾರಿಗೂ ಶಾಶ್ವತವಲ್ಲ. ವರಿಷ್ಠರ ತೀರ್ಮಾನ ಬರುವವರೆಗೂ ನಾವು ಮಾತನಾಡುವುದು ಸರಿಯಲ್ಲ’ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.
‘ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ’ ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಈ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಅವರ ನಿಲುವೇ ನನ್ನ ನಿಲುವು’ ಎಂದರು.
‘ಜನವರಿಯಲ್ಲಿ ಸಂಪುಟ ವಿಸ್ತರಣೆ ಎಂದು ಹೇಳಿದ್ದರು. ಆದರೆ ಯಾವ ಜನವರಿ ಎಂದು ಹೇಳಿಲ್ಲ’ ಎಂದರು.
ವಿವಿಧ ಇಲಾಖೆಗಳಲ್ಲಿ ಡಾ. ಯತೀಂದ್ರ ಹಸ್ತಕ್ಷೇಪ ಕುರಿತು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಕೆಲವು ಅಧಿಕಾರಿಗಳು ಶಂಖದಿಂದ ಬಂದರೆ ಮಾತ್ರ ತೀರ್ಥ ಎಂದುಕೊಂಡಿದ್ದಾರೆ. ನಾವು ಕೂಡ ಶಂಖ ಊದುವ ಕೆಲಸ ಮಾಡಲಿದ್ದೇವೆ. ಸೂಕ್ತ ಸನ್ನಿವೇಶ ಬಂದಾಗ ಎಲ್ಲವೂ ಬಹಿರಂಗವಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.