ADVERTISEMENT

ಶಿಕ್ಷಕರು ಸಮೀಕ್ಷೆಯಲ್ಲಿ ಕಡ್ಡಾಯ ಭಾಗವಹಿಸಿ: ತಹಶೀಲ್ದಾರ್ ನಿಸರ್ಗ ಪ್ರಿಯ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 3:19 IST
Last Updated 18 ಸೆಪ್ಟೆಂಬರ್ 2025, 3:19 IST
ಪಿರಿಯಾಪಟ್ಟಣದ ಅರಸು ಭವನದಲ್ಲಿ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಏರ್ಪಡಿಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ತರಬೇತಿ ಕಾರ್ಯಾಗಾರವನ್ನು ತಹಶೀಲ್ದಾರ್ ನಿಸರ್ಗಪ್ರಿಯ ಉದ್ಘಾಟಿಸಿ ಮಾತನಾಡಿದರು. ರವಿ ಪ್ರಸನ್ನ, ಕೃಷ್ಣೇಗೌಡ ಹಾಜರಿದ್ದರು
ಪಿರಿಯಾಪಟ್ಟಣದ ಅರಸು ಭವನದಲ್ಲಿ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಏರ್ಪಡಿಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ತರಬೇತಿ ಕಾರ್ಯಾಗಾರವನ್ನು ತಹಶೀಲ್ದಾರ್ ನಿಸರ್ಗಪ್ರಿಯ ಉದ್ಘಾಟಿಸಿ ಮಾತನಾಡಿದರು. ರವಿ ಪ್ರಸನ್ನ, ಕೃಷ್ಣೇಗೌಡ ಹಾಜರಿದ್ದರು   

ಪಿರಿಯಾಪಟ್ಟಣ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರು ಕಡ್ಡಾಯವಾಗಿ ನಡೆಸಬೇಕು ಎಂದು ತಹಶೀಲ್ದಾರ್ ನಿಸರ್ಗಪ್ರಿಯ ಸೂಚಿಸಿದರು.

ಪಟ್ಟಣದ ಅರಸು ಭವನದಲ್ಲಿ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಏರ್ಪಡಿಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಆಶಯದಂತೆ 15 ದಿನ ನಡೆಯುತ್ತಿರುವ ಈ ಸಮೀಕ್ಷೆಯು ಸೆ.22ರಿಂದ ಪ್ರಾರಂಭವಾಗಿ ಅ.7ರವರೆಗೆ ನಡೆಯಲಿದೆ. ಎಲ್ಲ ಜಾತಿ, ಧರ್ಮ ಜನಾಂಗದವರನ್ನು ಸಮೀಕ್ಷೆ ನಡೆಸಬೇಕಿದ್ದು, ಇದಕ್ಕಾಗಿ 60 ಪ್ರಶ್ನಾವಳಿಗಳನ್ನು ಸಿದ್ಧಪಡಿಸಿ ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ ನಡೆಸಬೇಕಿದೆ. ಸಾರ್ವಜನಿಕರಿಂದ ನಿಖರ ಮಾಹಿತಿ ಪಡೆದು ಆ್ಯಪ್‌‌ನಲ್ಲಿ ಭರ್ತಿ ಮಾಡಬೇಕಿದೆ. ಇದಕ್ಕಾಗಿ ಎರಡು ದಿನಗಳು ಸೂಕ್ತ ತರಬೇತಿ ನೀಡಲಾಗುತ್ತಿದೆ ಎಂದರು.

ADVERTISEMENT

ಬಿಇಒ ರವಿ ಪ್ರಸನ್ನ ಮಾತನಾಡಿ, ಸರ್ಕಾರದ ಈ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕಿದೆ. ಯಾವುದೇ ಸಬೂಬು ಹೇಳುವಂತಿಲ್ಲ. ನೆಪವೊಡ್ಡಿ ಸಮೀಕ್ಷೆ ಕಾರ್ಯದಿಂದ ತಪ್ಪಿಸಿಕೊಂಡಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಸಂಭವವಿರುತ್ತದೆ ಎಂದು ಎಚ್ಚರಿಸಿದರು. ಸೆ. 19 ರಂದು ಮತ್ತೆ ಸಮೀಕ್ಷೆ ನಡೆಸುವವರಿಗೆ ತರಬೇತಿ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ತಾಲ್ಲೂಕು ಬಿಸಿಎಂ ಅಧಿಕಾರಿ ಕೃಷ್ಣೆಗೌಡ, ಸಿಆರ್‌ಪಿಗಳು, ಬಿಆರ್‌‌ಸಿ ಸೇರಿದಂತೆ 700ಕ್ಕೂ ಹೆಚ್ಚು ಶಿಕ್ಷಕರು ತರಬೇತಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.