ADVERTISEMENT

‘ಜನರ ಬಾಳಿಗೆ ಬೆಳಕಾದ ರಾಜೇಂದ್ರ ಶ್ರೀ’

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2024, 14:49 IST
Last Updated 5 ಸೆಪ್ಟೆಂಬರ್ 2024, 14:49 IST
ಮೈಸೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ನಗರ ಘಟಕದಿಂದ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವರಾತ್ರಿ ರಾಜೇಂದ್ರ ಶ್ರೀಗಳ ಬಗ್ಗೆ ಮಾತನಾಡಿದ ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು
ಮೈಸೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ನಗರ ಘಟಕದಿಂದ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವರಾತ್ರಿ ರಾಜೇಂದ್ರ ಶ್ರೀಗಳ ಬಗ್ಗೆ ಮಾತನಾಡಿದ ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು   

ಮೈಸೂರು: ‘ಸುತ್ತೂರು ಮಠದ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜಾತಿ–ವರ್ಗ–ವರ್ಣ ತಾರತಮ್ಯವಿಲ್ಲದೆ ಎಲ್ಲರಿಗೂ ಅನ್ನ, ವಸತಿ ಹಾಗೂ ಆಶ್ರಯ ನೀಡಿ ಸಹಸ್ರಾರು ಜನರ ಬಾಳಿಗೆ ಬೆಳಕಾದರು’ ಎಂದು ಸಾಹಿತಿ ಎಂ.ಎ. ನೀಲಾಂಬಿಕೆ ಸ್ಮರಿಸಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ನಗರ ಘಟಕದಿಂದ ಬುಧವಾರ ಆಯೋಜಿಸಿದ್ದ ಸಂಸ್ಥಾಪಕ ದಿನಾಚರಣೆ ಹಾಗೂ ರಾಜೇಂದ್ರ ಶ್ರೀಗಳ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಶ್ರೀಗಳು ಎಲ್ಲರನ್ನೂ ಸಮಾನವಾಗಿ ಕಂಡರು. ಅವರಿಂದಾಗಿ ಬಹಳಷ್ಟು ಮಂದಿ ಉತ್ತಮ ಜೀವನ ಕಂಡುಕೊಂಡಿದ್ದಾರೆ’ ಎಂದರು.

ADVERTISEMENT

ಸ್ವಾಮೀಜಿ ಕುರಿತು ಮಾತನಾಡಿದ ಪೂಜಾ, ಜಯಲಕ್ಷ್ಮಿ, ಹರ್ಷಿತಾ, ಪ್ರಿಯಾ ಹಾಗೂ ರೇವತಿ ಅವರಿಗೆ ಪ್ರಮಾಣಪತ್ರ ಮತ್ತು ಪುಸ್ತಕ ಬಹುಮಾನ ನೀಡಲಾಯಿತು.

ಪರಿಷತ್ತಿನ ನಗರ ಘಟಕದ ಅಧ್ಯಕ್ಷ ಮ.ಗು. ಸದಾನಂದಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಸುರೇಶ್, ಸ್ವಾಮಿ, ದತ್ತಿದಾನಿಗಳಾದ ಪಿ.ಬಿ. ತ್ರಿಶೂಲ್, ಪಿ.ಮಲ್ಲಿಕಾರ್ಜುನ್ ಹಾಗೂ ಶಶಿಕಲಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.