ADVERTISEMENT

ಗಾಯಾಳುವಿಗೆ ತಹಶೀಲ್ದಾರ್ ನೆರವು

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 2:27 IST
Last Updated 9 ಆಗಸ್ಟ್ 2020, 2:27 IST
ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ತಹಶೀಲ್ದಾರ್ ತಮ್ಮ ಸರ್ಕಾರಿ ವಾಹನದಲ್ಲಿ ಕರೆದೊಯ್ದರು
ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ತಹಶೀಲ್ದಾರ್ ತಮ್ಮ ಸರ್ಕಾರಿ ವಾಹನದಲ್ಲಿ ಕರೆದೊಯ್ದರು   

ಪಿರಿಯಾಪಟ್ಟಣ: ಅಪಘಾತ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರರನ್ನು ತಹಶೀಲ್ದಾರ್ ಶ್ವೇತಾ ಎನ್. ರವೀಂದ್ರ ಅವರು ತಮ್ಮ ಸರ್ಕಾರಿ ವಾಹನದಲ್ಲಿ ಸಮೀಪದ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ತೋರಿದ್ದಾರೆ.

ಪಿರಿಯಾಪಟ್ಟಣ- ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮಂಚದೇವನಹಳ್ಳಿ ಗ್ರಾಮದ ಹೊರವಲಯದ ಹುಣಸವಾಡಿ ಸರ್ಕಲ್ ಗ್ರಾಮದ ಇಬ್ಬರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಬಿದ್ದಾಗ ಹಿಂಬದಿ ಸವಾರನಿಗೆ ಮುಖಕ್ಕೆ ತೀವ್ರ ಪೆಟ್ಟಾಗಿತ್ತು. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಮೀಪದಲ್ಲಿದ್ದ ಸಾರ್ವಜನಿಕರು ಬಂದು ನೋಡಿ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಅದೇ ವೇಳೆಗೆ ತಾಲ್ಲೂಕಿನ ಗಡಿಭಾಗ ಕೊಪ್ಪ ಬಳಿಯ ನೆರೆಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ತಹಶೀಲ್ದಾರ್ ಅಪಘಾತವಾಗಿರುವುದನ್ನು ಗಮನಿಸಿ ತಕ್ಷಣ ತಮ್ಮ ವಾಹನದಲ್ಲಿ ಸಮೀಪದ ಕೊಪ್ಪ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.