ADVERTISEMENT

ಅಹವಾಲು ಸ್ವೀಕರಿಸಿದ ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2025, 16:43 IST
Last Updated 5 ಫೆಬ್ರುವರಿ 2025, 16:43 IST
ಮೈಸೂರು ತಾಲ್ಲೂಕಿನ ವರುಣ ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ವಿಷ್ಣುವರ್ಧನ ಮಾತನಾಡಿದರು
ಮೈಸೂರು ತಾಲ್ಲೂಕಿನ ವರುಣ ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ವಿಷ್ಣುವರ್ಧನ ಮಾತನಾಡಿದರು   

ಮೈಸೂರು: ತಾಲ್ಲೂಕಿನ ವರುಣ ‍ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿಷ್ಣುವರ್ಧನ್ ಜನಸಂಪರ್ಕ ಸಭೆ ನಡೆಸಿ, ಕುಂದುಕೊರತೆ ಆಲಿಸಿದರು.

ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ 250ಕ್ಕೂ ಹೆಚ್ಚು ಜನಪ್ರತಿನಿಧಿಗಳು, ನಾಗರಿಕರು ಸಭೆಯಲ್ಲಿ ಭಾಗವಹಿಸಿದ್ದರು. 

ಅಹವಾಲು ಸ್ವೀಕರಿಸಿದ ವಿಷ್ಣುವರ್ಧನ್, ‘ಇಲಾಖೆಯು ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಗೆ ಹಾಗೂ ಅಪರಾಧ ತಡೆಗೆ ಸಾರ್ವಜನಿಕರ ಸಹಕಾರವೂ ಮುಖ್ಯ’ ಎಂದರು.

ADVERTISEMENT

‘ಮುಂದಿನ ಸಭೆಯೊಳಗೆ ಎಲ್ಲ ಅಹವಾಲುಗಳ ಬೇಡಿಕೆ ಈಡೇರಿಸಲು ಹಾಗೂ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

ಎಎಸ್‌ಪಿಗಳಾದ ಸಿ.ಮಲ್ಲಿಕ್, ಎಲ್‌.ನಾಗೇಶ್‌ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.