ADVERTISEMENT

ಮೈಸೂರು ಅರಮನೆಯಲ್ಲಿ ದೀಪಾಲಂಕಾರ ಇಲ್ಲ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 12:55 IST
Last Updated 24 ಡಿಸೆಂಬರ್ 2020, 12:55 IST
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ   

ಮೈಸೂರು: ಹೊಸ ವರ್ಷಾಚರಣೆಯಂದು ಪ್ರತಿ ವರ್ಷ ಇಲ್ಲಿನ ಅರಮನೆಯಲ್ಲಿ ನಡೆಯುತ್ತಿದ್ದ ದೀಪಾಲಂಕಾರ, ಬಾಣಬಿರುಸುಗಳ ಪ್ರದರ್ಶನ ಹಾಗೂ ಫಲಪುಷ್ಪ ಪ್ರದರ್ಶನಗಳನ್ನು ಈ ಬಾರಿ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುವ ಪ್ರವಾಸಿಗರ ಮೇಲೂ ಕೆಲವೊಂದು ನಿರ್ಬಂಧಗಳನ್ನು ವಿಧಿಸಲು ಚಿಂತಿಸಲಾಗಿದೆ ಎಂದು ಹೇಳಿದರು.

ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ನ. 25ರಿಂದ ಇಲ್ಲಿಯವರೆಗೆ ಅತಿ ಹೆಚ್ಚಿನ ಮಂದಿ ಬ್ರಿಟನ್‌ನಿಂದ ಮೈಸೂರಿಗೆ ಬಂದಿದ್ದಾರೆ. ಬಂದಿರುವ 137 ಮಂದಿಯ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಡಿ. 21ರಂದು ಬಂದ 18 ಮಂದಿ ಸೇರಿದಂತೆ ಬಹುತೇಕ ಮಂದಿಗೆ ನೆಗೆಟಿವ್ ಬಂದಿದೆ. ಇನ್ನಷ್ಟು ಮಂದಿಯ ವರದಿಗಳು ಬರಬೇಕಿದೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.