ತಿ.ನರಸೀಪುರ (ಮೈಸೂರು ಜಿಲ್ಲೆ): ‘ಕೋಲಾರದಲ್ಲಿ ನಾನೇ ಚುನಾವಣಾ ಸಮೀಕ್ಷೆ ಮಾಡಿಸಿದ್ದೆ. ತಂದೆ ಪರವಾಗಿಯೇ ವರದಿ ಬಂದಿತ್ತು. ಆದರೂ ಅಲ್ಲಿ ಸ್ಪರ್ಧೆ ಬೇಡ ಎಂದು ಹೈಕಮಾಂಡ್ ಹೇಳಿರುವುದರ ಕಾರಣ ಗೊತ್ತಾಗಿಲ್ಲ’ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೋಲಾರದಲ್ಲಿ ನಡೆದ ಬೇರೆ ಸಮೀಕ್ಷೆಗಳಲ್ಲೂ ಕಾಂಗ್ರೆಸ್‌ಗೆ ಪೂರಕ ವಾತಾವರಣ ಇರುವುದಾಗಿ ವರದಿಗಳು ಬಂದಿದ್ದವು. ‘ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷದ ನಾಯಕರು, ಆ ಕ್ಷೇತ್ರದ ಮುಖಂಡರೊಂದಿಗೆ ಸಮಾಲೋಚಿಸಬೇಕಿದೆ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.