ADVERTISEMENT

ಟಿಕೆಟ್‌ ವಿಚಾರ ವರಿಷ್ಠರಿಗೆ ಬಿಟ್ಟಿದ್ದು: ಮುನಿರತ್ನ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 20:29 IST
Last Updated 29 ಸೆಪ್ಟೆಂಬರ್ 2020, 20:29 IST

ಮೈಸೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಬೆನ್ನಲೇ ಚಲನಚಿತ್ರ ನಿರ್ಮಾಪಕ ಹಾಗೂ ಬಿಜೆಪಿ ಮುಖಂಡ ಮುನಿರತ್ನ ಅವರು ಮಂಗಳವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು.

‘ರಾಜರಾಜೇಶ್ವರಿ ಕ್ಷೇತ್ರ ಅಭಿವೃದ್ಧಿ ಪಥದಲ್ಲಿದೆ. ಈಗ ನಮ್ಮ ಸರ್ಕಾರವಿದೆ, ನಮ್ಮ ಮುಖ್ಯಮಂತ್ರಿ ಇದ್ದಾರೆ. ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಕಷ್ಟು ಅವಕಾಶಗಳು ಇವೆ. ಈ ಬಾರಿ ಬಿಜೆಪಿಗೆಲ್ಲುವ ವಿಶ್ವಾಸವಿದೆ’ ಎಂದು ಕ್ಷೇತ್ರದ ಮಾಜಿ ಶಾಸಕರೂ ಆದ ಮುನಿರತ್ನ ಹೇಳಿದರು.

‘ಈಗಾಗಲೇ ಉಪಚುನಾವಣೆಯಲ್ಲಿ ಬೆಂಗಳೂರು ನಗರದ ಯಶವಂತಪುರ, ಕೆ.ಆರ್‌.ಪುರ, ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ. ಅದೇ ರೀತಿ ಇಲ್ಲೂ ಉಪಚುನಾವಣೆ ನಡೆಯಲಿದೆ. ಟಿಕೆಟ್‌ ಯಾರಿಗೆ ಸಿಗಲಿದೆ ಎಂಬುದು ವರಿಷ್ಠರಿಗೆ ಬಿಟ್ಟ ವಿಚಾರ’ ಎಂದರು.

ADVERTISEMENT

‘ಕೊರೊನಾ ಸೋಂಕಿನಿಂದಾಗಿ ಒಂದು ತಿಂಗಳಿನಿಂದ ಹೋಂ ಕ್ವಾರಂಟೈನ್‌ನಲ್ಲಿದ್ದೆ. ನೆಗೆಟಿವ್‌ ಬಂದ ಮೇಲೆ ದೇವರ ದರ್ಶನಕ್ಕೆ ಬಂದಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.