ADVERTISEMENT

ಆಕ್ಸಿಜನ್ ಪೂರೈಕೆಯಲ್ಲಿ ವಿಳಂಬವಾಗಿಲ್ಲ: ಮೈಸೂರು ಜಿಲ್ಲಾಡಳಿತ

​ಪ್ರಜಾವಾಣಿ ವಾರ್ತೆ
Published 3 ಮೇ 2021, 6:46 IST
Last Updated 3 ಮೇ 2021, 6:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೈಸೂರು: ಚಾಮರಾಜನಗರಕ್ಕೆ ಅಧಿಕೃತವಾಗಿ 250 ಆಕ್ಸಿಜನ್ ಸಿಲಿಂಡರ್ ಅನ್ನು ಭಾನುವಾರ ಮಧ್ಯರಾತ್ರಿಯ ವೇಳೆಗೆ ಕಳುಹಿಸಲಾಗಿದ್ದು, ಯಾವುದೇ ವಿಳಂಬವಾಗಿಲ್ಲ ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ‌.

ಆಕ್ಸಿಜನ್ ಲಿಕ್ವಿಡ್ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದನ್ನು ಸರಿಯಾದ ಸಮಯದಲ್ಲಿ ಬಂದಿದೆಯೋ, ಇಲ್ಲವೋ ಗೊತ್ತಿಲ್ಲ. ಚಾಮರಾಜನಗರದ ಜಿಲ್ಲಾಡಳಿತದ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ಮೈಸೂರಿನ ಸೌತ್ರನ್ ಗ್ಯಾಸ್ ನಿಂದ 210 ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಗ್ಯಾಸ್ ಸಿಲಿಂಡರ್ ವತಿಯಿಂದ ಚಾಮರಾಜನಗರಕ್ಕೆ ಭಾನುವಾರ ಮಧ್ಯರಾತ್ರಿಯೆ ರವಾನೆ ಆಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಚಾಮರಾಜನಗರ ಜಿಲ್ಲಾಸ್ಪತತ್ರೆಯಲ್ಲಿ ಆಮ್ಲಜನಕ ಖಾಲಿಯಾಗಿ 23 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, 12 ಜನ ಮಾತ್ರ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ADVERTISEMENT

ಮೈಸೂರಿನಿಂದ ಸಿಲಿಂಡರ್ ಪೂರೈಕೆಯಾಗದೇ ಇದ್ದುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಹೇಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.