ADVERTISEMENT

ಮೈಸೂರು: ಅವಶ್ಯಕ ವಸ್ತುಗಳ ಖರೀದಿಗಷ್ಟೇ ಅವಕಾಶ

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 2:27 IST
Last Updated 7 ಜೂನ್ 2021, 2:27 IST

ಮೈಸೂರು: ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಅವಶ್ಯಕ ವಸ್ತುಗಳಾದ ದಿನಸಿ, ಹಣ್ಣು, ತರಕಾರಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದನ್ನು ಬಿಟ್ಟು ಬೇರೆ ಯಾವುದೇ ಅಂಗಡಿ ತೆರೆಯಲು ಅನುಮತಿ ನೀಡಲಾಗಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

ಈ ಆದೇಶವು ಜೂನ್ 14ರವರೆಗೂ ಇರುತ್ತದೆ. ಈ ವೇಳೆ ಅವಶ್ಯಕ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಇತರೇ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿರುವುದು ಕಂಡು ಬಂದಲ್ಲಿ, ಅಂತಹವರ ವಿರುದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಅಂಗಡಿಯ ಪರವಾನಗಿಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಅನವಶ್ಯಕವಾಗಿ ಹೊರಗಡೆ ಓಡಾಡದೇ, ಕೇವಲ ಅವಶ್ಯಕ ವಸ್ತುಗಳಾದ ದಿನಸಿ, ಹಣ್ಣು, ತರಕಾರಿಗಳ ಖರೀದಿ ಸಂಬಂಧ ಮಾತ್ರ ಸಾರ್ವಜನಿಕರು ಹೊರಗಡೆ ಬರಬೇಕು. ಸಾರ್ವಜನಿಕರು ದೂರದ ಅಂಗಡಿಗಳಿಗೆ ಹೋಗದೇ, ತಮ್ಮ ಮನೆಯ ಸಮೀಪ ಇರುವ ಅಂಗಡಿಗಳಿಗೆ ಮಾತ್ರ ತೆರಳಿ ಖರೀದಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.