ಆತ್ಮಹತ್ಯೆ– ಪ್ರಾತಿನಿಧಿಕ ಚಿತ್ರ
ಮೈಸೂರು: ಹಣಕಾಸಿನ ವಿಚಾರದಲ್ಲಿ ಉಂಟಾದ ಕೌಟುಂಬಿಕ ಸಮಸ್ಯೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಮ್ಮನಹಳ್ಳಿಯಲ್ಲಿ ಸೋಮವಾರ ರಾತ್ರಿ ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಹೋದರ ಜೋಬಿ ಆ್ಯಂಟೋನಿ (45) ಹಾಗೂ ಜೋಬಿ ಅವರ ಪತ್ನಿ ಶರ್ಮಿಳಾ (40) ಶವ ವಿಜಯನಗರದ ಸಾರ್ವಜನಿಕ ಕ್ರೀಡಾಂಗಣದ ನೀರಿನ ಟ್ಯಾಂಕ್ ನ ಏಣಿಯಲ್ಲಿ ಮಂಗಳವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಮಾಡಿದ ವಿಡಿಯೋದಲ್ಲಿ 'ಜೋಬಿಯಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ನನ್ನ ತಂಗಿ ಹಾಗೂ ಆಕೆಯ ಮಗುವನ್ನೂ ಕೊಲ್ಲಲು ಅವರು ಪ್ರೇರೇಪಿಸಿದ್ದಾರೆ' ಎಂದು ತಿಳಿಸಿದ್ದು, ಈ ಬಗ್ಗೆ ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
'ಜೋಬಿ ಹಾಗೂ ಶರ್ಮಿಳಾ ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಭಯಪಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎನ್ನಲಾಗಿದೆ. ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
'ಹಣಕಾಸಿನ ವಿಚಾರದಲ್ಲಿ ಕುಟುಂಬದೊಳಗೆ ಉಂಟಾದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕದಕೆ ತಿಳಿದುಬಂದಿದ್ದು, ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
'ಜೋಬಿ ಆ್ಯಂಟೋನಿ ತನ್ನ ತಂಗಿ ಹೆಸರಿನಲ್ಲಿ ಬೆಟ್ಟಿಂಗ್ ಗಾಗಿ ಲಕ್ಷಾಂತರ ಸಾಲ ಮಾಡಿದ್ದು, ಅದೇ ವಿಚಾರದಲ್ಲಿ ವಿವಾದ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.