ADVERTISEMENT

ಸೆರೆ ಸಿಕ್ಕ ಹುಲಿಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 14:14 IST
Last Updated 14 ಅಕ್ಟೋಬರ್ 2019, 14:14 IST
ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಸೇರಿದ ಕೂರ್ಗಳ್ಳಿ ಚಾಮುಂಡಿ ವನ್ಯಜೀವಿ ಮತ್ತು ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿರುವ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸೆರೆ ಸಿಕ್ಕ ಹುಲಿ ಸೋಮವಾರ ಕ್ಯಾಮೆರಾ ಕಣ್ಣಿಗೆ ಸೆರೆಯಾಯಿತು
ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಸೇರಿದ ಕೂರ್ಗಳ್ಳಿ ಚಾಮುಂಡಿ ವನ್ಯಜೀವಿ ಮತ್ತು ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿರುವ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸೆರೆ ಸಿಕ್ಕ ಹುಲಿ ಸೋಮವಾರ ಕ್ಯಾಮೆರಾ ಕಣ್ಣಿಗೆ ಸೆರೆಯಾಯಿತು   

ಮೈಸೂರು: ಗುಂಡ್ಲುಪೇಟೆಯಲ್ಲಿ ಸೆರೆ ಸಿಕ್ಕ ನರಭಕ್ಷಕ ಹುಲಿಯನ್ನು ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ ಸೇರಿದ ಕೂರ್ಗಳ್ಳಿಯಲ್ಲಿರುವ ಚಾಮುಂಡಿ ವನ್ಯಜೀವಿ ಸಂರಕ್ಷಣಾ ಮತ್ತು ಪುನರ್ವಸತಿ ಕೇಂದ್ರದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಮೃಗಾಲಯದ ಪಶುವೈದ್ಯ ಡಾ.ರಮೇಶ್, ‘ಹುಲಿಯು ನೆನ್ನೆಯಷ್ಟೇ ಬಂದಿದೆ. ಇದರ ಮೇಲೆ ನಿಗಾ ಇರಿಸಲಾಗಿದೆ. ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದರು.

‌ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್‌ ಕುಲಕರ್ಣಿ ಮಾತನಾಡಿ, ‘ಹುಲಿ ಮೊದಲು ಈ ವಾತಾವರಣಕ್ಕೆ ಹೊಂದಿಕೊಳ್ಳಬೇಕು. ನಂತರವಷ್ಟೇ ಅದನ್ನು ಏನು ಮಾಡಬೇಕು ಎಂದು ಚಿಂತನೆ ನಡೆಸಲಾಗುವುದು. ಇನ್ನೂ ಒಂದಷ್ಟು ಅದನ್ನು ಪುನರ್ವಸತಿ ಕೇಂದ್ರದಲ್ಲಿಯೇ ಇರಿಸಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಮೃಗಾಲಯದ ಹುಲಿ ಸೇರಿದಂತೆ ಈಚೆಗೆ ನಾಗರಹೊಳೆ ಹಾಗೂ ಇತರೆಡೆ ಸೆರೆ ಹಿಡಿದ ಹುಲಿಗಳೂ ಸೇರಿದಂತೆ ಒಟ್ಟು 6 ಹುಲಿಗಳು ಪುನರ್ವಸತಿ ಕೇಂದ್ರದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.