ADVERTISEMENT

ಮೈಸೂರು ವಿ.ವಿ ಘಟಿಕೋತ್ಸವ ಇಂದು

ವರ್ಚುವಲ್‌ ವೇದಿಕೆ ಮೂಲಕ ಪ್ರಧಾನಿ ಭಾಷಣ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 2:11 IST
Last Updated 19 ಅಕ್ಟೋಬರ್ 2020, 2:11 IST

ಮೈಸೂರು: ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಸಮಾರಂಭ ಸೋಮವಾರ ಬೆಳಿಗ್ಗೆ 10.30 ಕ್ಕೆ ಕ್ರಾಫರ್ಡ್‌ ಭವನದಲ್ಲಿ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಪ್ರಧಾನಿ ಭಾಷಣ ಬೆಳಿಗ್ಗೆ 11.15 ರಿಂದ 11.40ರ ವರೆಗೆ ಇರಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಇನ್ಫೊಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.

ADVERTISEMENT

ಕೊರೊನಾ ಮಾರ್ಗಸೂಚಿಯಂತೆ ಕಾರ್ಯಕ್ರಮ ರೂಪಿಸಲಾಗಿದ್ದು, ಕ್ರಾಫರ್ಡ್‌ ಹಾಲ್‌ಗೆ 100 ಮಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ವಿವಿಧ ಬ್ಯಾಚ್‌ಗಳಲ್ಲಿ ಪದಕ ಹಾಗೂ ಪದವಿ ಪ್ರದಾನ ಮಾಡಲಾಗುತ್ತದೆ.

ಈ ಬಾರಿ 392 ಚಿನ್ನದ ಪದಕ ಮತ್ತು 198 ನಗದು ಬಹುಮಾನಗಳನ್ನು 230 ಮಂದಿ ಹಂಚಿಕೊಂಡಿದ್ದಾರೆ. 29,018 ಅಭ್ಯರ್ಥಿಗಳು ವಿವಿಧ ಪದವಿಗಳನ್ನು ಪಡೆಯಲಿದ್ದಾರೆ. 264 ಮಹಿಳೆಯರು ಮತ್ತು 390 ಪುರುಷರು ಒಳಗೊಂಡಂತೆ ಒಟ್ಟು 654 ಮಂದಿಗೆ ಪಿಎಚ್‌.ಡಿ ಪದವಿ ಪ್ರದಾನ ಮಾಡಲಾಗುತ್ತದೆ.

ವಿಶ್ವವಿದ್ಯಾಲಯದ ಅಧಿಕೃತ ವೈಬ್‌ಸೈಟ್‌, (https://uni-mysore.ac.in/), ಯೂಟ್ಯೂಬ್‌ (https://www.youtube.com/watch?v=TGVg5qx_T20) ಮತ್ತು ಫೇಸ್‌ಬುಕ್‌ನಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.