
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಮೈಸೂರು: ಚಾಮರಾಜಪುರಂ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ರೈಲು ಎಂಜಿನ್‌ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
‘ಗೇಟ್ ಹಾಕಿದ್ದರೂ ಸಬ್ ವೇ ಮೂಲಕ ಅವರು ರೈಲು ಹಳಿ ದಾಟಲು ಯತ್ನಿಸಿದ್ದಾರೆ. ಈ ವೇಳೆ ರೈಲಿನ ಎಂಜಿನ್ ಬಂದು ಡಿಕ್ಕಿಯಾಗಿದ್ದು, ತಲೆಗೆ ಬಲವಾದ ಗಾಯವಾಗಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಗುರುತು ತಿಳಿದುಬಂದಿಲ್ಲ. ಆದರೆ ಆತ ಚಾಮರಾಜನಗರ ಜಿಲ್ಲೆಯ ಹೆಗ್ಗೋಡಿನ ವ್ಯಕ್ತಿ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ರೈಲ್ವೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.