
ಎಚ್.ಡಿ.ಕೋಟೆ: ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಫಾರ್ಮಸಿ ಅಧಿಕಾರಿ ಎಚ್.ಎನ್. ಉಮೇಶ್ ಬಾಬು ಅವಿರೋಧವಾಗಿ ಆಯ್ಕೆಯಾದರು.
ಮೈಸೂರಿನಲ್ಲಿ ಈಚೆಗೆ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಶಾಖೆಗೆ ಸರ್ವ ಸದಸ್ಯರ ಸಭೆಯಲ್ಲಿ 2026- 29ನೇ ಸಾಲಿಗೆ ಆಯ್ಕೆ ಮಾಡಲಾಯಿತು.
ಪದಾಧಿಕಾರಿಗಳು: ನಾಗೇಶ್ ನೆಲಪ್ಪಗೋಳ್ (ಕಾರ್ಯದರ್ಶಿ), ವೈ.ಎಸ್. ಶಶಿಧರ (ರಾಜ್ಯ ಪರಿಷತ್ ಸದಸ್ಯ) ಕೆ.ವಿ.ಕವಿತಾ (ಜಿಲ್ಲಾ ಖಜಾಂಚಿ) ಅವಿರೋಧವಾಗಿ ಆಯ್ಕೆಯಾದರು.
ನಿಕಟಪೂರ್ವ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಲ್. ಸೋಮಶೇಖರ್, ಕೆ.ಆರ್.ಅನುಸೂಯ, ವಿ.ಮಂಜುನಾಥ, ಗಣೇಶ್ ರಾವ್, ಸುರೇಶ್, ಕೊಪ್ಪಳ ಜಿಲ್ಲಾ ಅಧ್ಯಕ್ಷ ಸುನಿಲ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ನಾಗಮಣಿ, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ಯತೀಶ್, ಮಂಡ್ಯ ಜಿಲ್ಲಾ ಕಾರ್ಯದರ್ಶಿ ರಮೇಶ್, ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಪ್ರಕಾಶ್ ಇದ್ದರು.