ಮೈಸೂರು: ‘ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ಸೋಲನ್ನು ಸವಾಲಾಗಿ ಸ್ವೀಕರಿಸಿ ಮುನ್ನಡೆಯಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯ ಕುಲಸಚಿವೆ ಎಂ.ಕೆ.ಸವಿತಾ ಹೇಳಿದರು.
ನಗರದ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಗುರುವಾರ ನಡೆದ ಸ್ನಾತಕ ವಿಭಾಗದ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಉದ್ಘಾಟಿಸಿ ಮಾತನಾಡಿದರು.
‘ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು. ಸಾಧ್ಯವಾದಷ್ಟು ಮೊಬೈಲ್ ಸಂಸ್ಕೃತಿಯಿಂದ ಹೊರಬಂದು ಪುಸ್ತಕ ಸಂಸ್ಕೃತಿಯನ್ನು ಬೆಳೆಸಿಕೊಳ್ಳಿ’ ಎಂದು ಸಲಹೆ ನೀಡಿದರು.
ಹಾಕಿ ಕ್ರೀಡಾಪಟು ಎಸ್.ಪಿ.ಕೃತಿಕಾ, ಪ್ರಾಂಶುಪಾಲ ಎಂ.ಪ್ರಭು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರೊ. ಬಿ.ವಿ.ಸಾಂಬಶಿವಯ್ಯ ಮಾತನಾಡಿದರು.
ಸಾಂಸ್ಕೃತಿಕ ವೇದಿಕೆ ಸಂಚಾಲಕ ವಿ.ಶಿವ, ಕ್ರೀಡಾ ವೇದಿಕೆ ಸಂಚಾಲಕ ಎಂ.ಕಾರ್ತಿಕ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.