ನಂಜನಗೂಡು: ನಗರದ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಆ.31 ರಂದು ನಡೆಯುವ ಉಪ್ಪಾರ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಭಗೀರಥ ಉಪ್ಪಾರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಶ್ ಉಪ್ಪಾರ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಂದು ಭೂಮಿ ಪೂಜೆ ನಡೆಯುವ ಉಪ್ಪಾರ ಸಮುದಾಯಭವನ ನಿರ್ಮಾಣಕ್ಕೆ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಎಂದರು. ಅಂದು ಬೆಳಿಗ್ಗೆ 10.30 ಗಂಟೆಗೆ ಭಗೀರಥ ಜಯಂತಿ ಅಂಗವಾಗಿ ನಗರದ ಜೂನಿಯರ್ ಕಾಲೇಜು ಮೈದಾನದ ಮುಂಭಾಗದಿಂದ ಭಗೀರಥ ಮಹರ್ಷಿಯ ಭಾವಚಿತ್ರದ ಮೆರವಣಿಗೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ, ಸಂಘದ ರಾಜ್ಯಾಧ್ಯಕ್ಷ ಪುಟ್ಟರಂಗ ಶೆಟ್ಟಿ, ಸಚಿವ ಎಚ್.ಸಿ.ಮಹದೇವಪ್ಪ, ಸಂಸದ ಸುನೀಲ್ ಬೋಸ್, ಯತೀಂದ್ರ ಸಿದ್ದರಾಮಯ್ಯ ಭಾಗವಹಿಸುವರು ಎಂದು ಹೇಳಿದರು.
ಕಲ್ಲಂಗಡಿ ಮಹದೇವು,ನಾಗರಾಜು,ಅಂಬಳೆ ಮಹದೇವಶೆಟ್ಟಿ,ಗಣೇಶ್ ಉಪ್ಪಾರ್,ಕೂಡ್ನಳ್ಳಿ ಬಸವಶೆಟ್ಟಿ,ಶಿವಣ್ಣ,ಸಿದ್ದಣ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.