ಕೇಂದ್ರ ಲೋಕಸೇವಾ ಆಯೋಗವು (UPSC) 2024ರಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ (CSE) 263ನೇ ರ‍್ಯಾಂಕ್ ಪಡೆದಿದ್ದಾರೆ ಅಪ್ಪಟ ಗ್ರಾಮೀಣ ಪ್ರತಿಭೆ ಎ.ಸಿ. ಪ್ರೀತಿ (A C Preethi). ಕೃಷಿಯ ಜೊತೆಗೆ ಬಿಡುವಿನ ವೇಳೆಯಲ್ಲಿ ಅಡುಗೆ ಭಟ್ಟರಾಗಿ ಕೆಲಸ ಮಾಡುವ ರೈತ ಚನ್ನಬಸಪ್ಪ ಮತ್ತು ನೇತ್ರಾವತಿ ದಂಪತಿಯ ಪುತ್ರಿ ಪ್ರೀತಿ, ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಅಂಕನಹಳ್ಳಿಯವರು.
10ನೇ ತರಗತಿವರೆಗೆ ಅಂಕನಹಳ್ಳಿ ಸರ್ಕಾರಿ ಶಾಲೆಯಲ್ಲಿ, ನಂತರ ಪದವಿಪೂರ್ವ ಶಿಕ್ಷಣವನ್ನು ಕೆ.ಆರ್.ನಗರ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಪೂರೈಸಿದ್ದಾರೆ. ಮಂಡ್ಯದ ವಿಸಿ ಫಾರಂನಲ್ಲಿ ಕೃಷಿ ಬಿಎಸ್‌ಸಿ ಹಾಗೂ ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದಾರೆ. ಮೂರನೇ ಪ್ರಯತ್ನದಲ್ಲಿ ಯಶಸ್ಸು ಸಾಧಿಸಿರುವ ಪ್ರೀತಿ, ಯಾವುದೇ ಕೋಚಿಂಗ್ ಪಡೆಯದೇ, ಗ್ರಂಥಾಲಯಗಳಲ್ಲಿಯೇ ಓದಿ ಈ ಸಾಧನೆ ಮಾಡಿದ್ದಾರೆ.
ಇಂಗ್ಲಿಷ್ ಬರುವುದಿಲ್ಲ ಎನ್ನುವ ಕೀಳರಿಮೆ ಬಿಟ್ಟಲ್ಲಿ ಎಲ್ಲರೂ ಈ ಪರೀಕ್ಷೆಯಲ್ಲಿ ಯಶಸ್ಸು ಗಳಿಸಬಹುದು ಎನ್ನುವ ಅವರು, ಈ ವಿಡಿಯೊದಲ್ಲಿ ಪರೀಕ್ಷಾರ್ಥಿಗಳಿಗೆ ಅನೇಕ ಟಿಪ್ಸ್ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.