ADVERTISEMENT

ಬಿಜೆಪಿಗೆ ಯಾರ ಜತೆಯೂ ಮೈತ್ರಿ ಬೇಕಾಗಿಲ್ಲ: ಶ್ರೀನಿವಾಸಪ್ರಸಾದ್

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 8:45 IST
Last Updated 7 ಡಿಸೆಂಬರ್ 2021, 8:45 IST
ವಿ.ಶ್ರೀನಿವಾಸಪ್ರಸಾದ್‌
ವಿ.ಶ್ರೀನಿವಾಸಪ್ರಸಾದ್‌   

ಮೈಸೂರು: ‘ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಯಾರ ಜತೆಯೂ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ’ ಎಂದು ಚಾಮರಾಜನಗರದ ಸಂಸದ ವಿ.ಶ್ರೀನಿವಾಸಪ್ರಸಾದ್‌ ಹೇಳಿದರು.

ಇಲ್ಲಿನ ಜಯಲಕ್ಷ್ಮಿಪುರಂನ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾವು ಸ್ಪರ್ಧಿಸಿರುವ ಆರು ಕಡೆಗಳಲ್ಲಿ ಬೆಂಬಲ ಕೊಡಿ ಎಂದು ಜೆಡಿಎಸ್‌ನವರು ಬಿಜೆಪಿಯನ್ನು ಕೇಳಿದ್ದಾರೆ. ಜೆಡಿಎಸ್‌ ಸ್ಪರ್ಧಿಸದ ಕಡೆಗಳಲ್ಲಿ ಬೆಂಬಲ ನೀಡಿದರೆ ಬಿಜೆಪಿಗೆ ಅನುಕೂಲ ಆಗಲಿದೆ ಎಂದು ಬಿ.ಎಸ್‌.ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಬಗ್ಗೆ ಹೈಕಮಾಂಡ್‌ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದರು.

ಶಾಸಕ ಜಿ.ಟಿ.ದೇವೇಗೌಡ ಮತ್ತು ಸಿದ್ದರಾಮಯ್ಯ ಹತ್ತಿರವಾಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ‘ಕಳೆದ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಹೀನಾಯವಾಗಿ ಸೋಲಿಸಿದ್ದರು. ಬಾದಾಮಿಯಲ್ಲಿ ಗೆಲ್ಲದಿದ್ದರೆ, ಅವರು ಸಿದ್ದರಾಮನಹುಂಡಿಗೆ ಹೋಗಬೇಕಿತ್ತು. ವಾಸ್ತವ ಹೀಗಿದ್ದರೂ, ತಮ್ಮನ್ನು ಸೋಲಿಸಿದ್ದ ಜಿ.ಟಿ.ದೇವೇಗೌಡ ಅವರೊಂದಿಗೆ ಕೈಜೋಡಿಸಿರುವುದು ನಗೆಪಾಟಲಿಗೀಡಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.