ADVERTISEMENT

ವಿಷಪೂರಿತ ಪ್ರಸಾದ ಸೇವನೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ವಾಟಾಳ್ ಆಗ್ರಹ

ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2018, 15:22 IST
Last Updated 16 ಡಿಸೆಂಬರ್ 2018, 15:22 IST
   

ಮೈಸೂರು: ವಿಷಪೂರಿತ ಪ್ರಸಾದ ಸೇವನೆ ಪ್ರಕರಣ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆಆಗ್ರಹಿಸಿ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

ಕೆ.ಆರ್‌.ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ತಪ್ಪಿತಸ್ಥರನ್ನು ಗಲ್ಲಿಗೆ ಹಾಕಬೇಕು. ಬೆಳಗಾವಿ ಅಧಿವೇಶನ 20ಕ್ಕೆ ಮುಗಿಯಲಿದೆ. ಡಿ. 18, 19ರಂದು ತನಿಖೆಗೆ ಆಗ್ರಹಿಸಿ ಧರಣಿ ನಡೆಸುವೆ’ ಎಂದು ಅವರು ತಿಳಿಸಿದರು.

ADVERTISEMENT

‘ಘಟನೆಯ ಬಗ್ಗೆ ಆರೋಗ್ಯ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಅವರಿಗೆ ಆರೋಗ್ಯ ಸರಿಯಿಲ್ಲ. ಅರೆಹುಚ್ಚರಾಗಿರುವ ಅವರು ಕೂಡಲೇ ರಾಜಿನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

‘ಅಲ್ಲದೇ, ಸರ್ಕಾರ ₹ 5 ಲಕ್ಷ ಪರಿಹಾರ ನೀಡಿದರೆ ಅದು ಅನ್ಯಾಯ. ಅದನ್ನು ಕನಿಷ್ಠ 10 ಲಕ್ಷಕ್ಕೆ ಏರಿಸಬೇಕು. ಬದುಕುಳಿದವರಿಗೆ ಸರ್ಕಾರಿ ಉದ್ಯೋಗ ನೀಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.