ADVERTISEMENT

ನಾಗಮಂಗಲ | ವಾಹನ ಡಿಕ್ಕಿ: ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 7 ಜೂನ್ 2024, 14:03 IST
Last Updated 7 ಜೂನ್ 2024, 14:03 IST
ನಾಗಮಂಗಲ ತಾಲ್ಲೂಕಿನ ಎ.ನಾಗತಿಹಳ್ಳಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಚಿರತೆಯ ಮೃತ ದೇಹ
ನಾಗಮಂಗಲ ತಾಲ್ಲೂಕಿನ ಎ.ನಾಗತಿಹಳ್ಳಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಚಿರತೆಯ ಮೃತ ದೇಹ   

ನಾಗಮಂಗಲ: ತಾಲ್ಲೂಕಿನ ಎ.ನಾಗತಿಹಳ್ಳಿ ಗ್ರಾಮದ ಬಳಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯು ಸ್ಥಳದಲ್ಲೇ ಸಾವನ್ನಪ್ಪಿದೆ.

ಶುಕ್ರವಾರ ಬೆಳಗಿನ ಜಾವ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿಯಾಗಿದ್ದು, ತೀವ್ರವಾಗಿ ಗಾಯಗೊಂಡು ಎರಡು ವರ್ಷದ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ನಂತರ ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮತ್ತು ಉಪವಲಯ ಅರಣ್ಯಾಧಿಕಾರಿ ಮಂಜು ಪರಿಶೀಲನೆ ನಡೆಸಿದ್ದಾರೆ. ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ಚಿರತೆಯ ಕಳೆಬರವನ್ನು ಅಧಿಕಾರಿಗಳ ಸಮ್ಮುಖದಲ್ಲಿ ಸುಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT