ಮೈಸೂರು: ನಗರದಲ್ಲಿ ಅಹಿತಕರ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಬುಧವಾರ ಖುದ್ದು ಕಾರ್ಯಾಚರಣೆಗೆ ಇಳಿದಿದ್ದು, ವಿವಿಧ ಕಡೆಗಳಲ್ಲಿ ವಾಹನ ತಪಾಸಣೆ ನಡೆಸಿದರು.
ಸಂಚಾರ ನಿಯಮದ ಉಲ್ಲಂಘನೆ ಹಾಗೂ ವಾಹನಗಳಲ್ಲಿ ಮಾರಕಾಸ್ತ್ರಗಳ ಸಾಗಣೆ ನಿಯಂತ್ರಣದ ಸಲುವಾಗಿ ಕಮಿಷನರೇಟ್ ವ್ಯಾಪ್ತಿಯ ಸುಮಾರು 40 ಕಡೆಗಳಲ್ಲಿ ವಾಹನ ತಪಾಸಣೆ ನಡೆಯಿತು.
‘ಮುನ್ನೆಚ್ಚರಿಕೆ ಕ್ರಮವಾಗಿ ವಾಹನಗಳ ತಪಾಸಣೆ ನಡೆಸಿದ್ದೇವೆ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲಿದ್ದೇವೆ. ಅನುಮಾನಾಸ್ಪದ ವ್ಯಕ್ತಿಗಳಿದ್ದರೆ ಅವರ ಬಗ್ಗೆ ತನಿಖೆ ನಡೆಸಲಿದ್ದೇವೆ. ಸಹೋದ್ಯೋಗಿಗಳಿಗೆ ಹುರುಪು ತುಂಬಲು ತಂಡದ ಮುಖ್ಯಸ್ಥನಾಗಿ ನಾನೇ ಕಾರ್ಯಾಚರಣೆಗೆ ಇಳಿದಿದ್ದೇನೆ’ ಎಂದು ರಮೇಶ್ ಬಾನೋತ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.