ADVERTISEMENT

ಉಪರಾಷ್ಟ್ರಪತಿ ಮೈಸೂರು ಪ್ರವಾಸ 9ರಂದು

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2025, 13:09 IST
Last Updated 7 ನವೆಂಬರ್ 2025, 13:09 IST
ಸಿ.ಪಿ.ರಾಧಾಕೃಷ್ಣನ್
ಸಿ.ಪಿ.ರಾಧಾಕೃಷ್ಣನ್   

ಮೈಸೂರು: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ನ.9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅಂದು ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವರು. ಮಧ್ಯಾಹ್ನ 2.45ಕ್ಕೆ ಶಿವರಾತ್ರೀಶ್ವರನಗರದಲ್ಲಿ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ವಾರ್ಷಿಕ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವರು. ಸಂಜೆ 4.15ಕ್ಕೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT