ಮೈಸೂರು: ‘ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಪ್ರಮುಖ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಇಲ್ಲಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ರಾಷ್ಟ್ರ ನಿರ್ಮಾಪಕರಾಗಿ ಯುವಕರು, ಪ್ರಗತಿಪರ ಭಾರತಕ್ಕಾಗಿ ದೃಷ್ಟಿ’ ಶೀರ್ಷಿಕೆಯಡಿ ಶುಕ್ರವಾರ ನಡೆದ ಅಧಿವೇಶನದಲ್ಲಿ ಮಾತನಾಡಿದರು.
ರಾಜಕೀಯ ಮತ್ತು ಉದ್ಯಮಶೀಲತೆಯಂತಹ ಪ್ರಮುಖ ಕ್ಷೇತ್ರಗಳನ್ನು ವೇದಿಕೆಗಳಾಗಿ ಗುರುತಿಸಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆಡಳಿತ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.
ಅಧಿವೇಶನದಲ್ಲಿ ಗ್ರಾಮೀಣ, ನಗರ ಏಕೀಕರಣ, ಕೌಶಲ ಆಧಾರಿತ ಕಲಿಕೆ ಮತ್ತು ನಾವೀನ್ಯತೆ, ಸಂಪರ್ಕ ಉತ್ತೇಜಿಸುವಲ್ಲಿ ಶಿಕ್ಷಣದ ಪಾತ್ರ ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಮುಖ ವಿಷಯಗಳನ್ನು ಚರ್ಚಿಸಲಾಯಿತು.
ಕಾಲೇಜು ಅಧ್ಯಕ್ಷ ಗುಂಡಪ್ಪ ಗೌಡ, ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿ ಶ್ರೀಶೈಲಾ ರಾಮಣ್ಣವರ್, ಪ್ರಾಂಶುಪಾಲ ಬಿ.ಸದಾಶಿವ ಗೌಡ, ನಿಖಿಲೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.