ADVERTISEMENT

ಚಿರತೆ ಸೆರೆ: ನಿಟ್ಟುಸಿರುವ ಬಿಟ್ಟ ಜನ

ಅರಣ್ಯಾಧಿಕಾರಿ, ಸಾರ್ವಜನಿಕರಿಗೆ ಚಿರತೆ ದಾಳಿಯಿಂದ ಗಾಯ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2022, 20:32 IST
Last Updated 4 ನವೆಂಬರ್ 2022, 20:32 IST
ಕೆ.ಆರ್.ನಗರ ಮುಳ್ಳೂರು ರಸ್ತೆಯಲ್ಲಿನ ರಾಜ್ ಪ್ರಕಾಶ್ ಶಾಲೆ ಬಳಿ ಶುಕ್ರವಾರ ಜನರಲ್ಲಿ ಸಾಕಷ್ಟು ಆತಂಕ ಸೃಷ್ಠಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಪಶುವೈದ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಚರಣೆಯಲ್ಲಿ ಸೆರೆ ಸಿಕ್ಕ ಚಿರತೆ
ಕೆ.ಆರ್.ನಗರ ಮುಳ್ಳೂರು ರಸ್ತೆಯಲ್ಲಿನ ರಾಜ್ ಪ್ರಕಾಶ್ ಶಾಲೆ ಬಳಿ ಶುಕ್ರವಾರ ಜನರಲ್ಲಿ ಸಾಕಷ್ಟು ಆತಂಕ ಸೃಷ್ಠಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಪಶುವೈದ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಚರಣೆಯಲ್ಲಿ ಸೆರೆ ಸಿಕ್ಕ ಚಿರತೆ   

ಕೆ.ಆರ್.ನಗರ: ಪಟ್ಟಣದ ಮುಳ್ಳೂರು ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಅರಣ್ಯ ಇಲಾಖೆ ಅಧಿಕಾರಿ ಸೇರಿದಂತೆ 3-4 ಜನರಿಗೆ ಗಾಯಗೊಳಿಸಿ ಜನರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಸೆರೆ ಸಿಕ್ಕಿದೆ.

ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್, ಕನಕನಗರ ನಿವಾಸಿಗಳಾದ ವೆಂಕಟೇಶ್, ಕರಿಗೌಡ, ಪರಶಿವ ಗಾಯಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಪಶುವೈದ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸಿ ಕೊನೆಗೂ ಸೆರೆ ಹಿಡಿದಿದ್ದಾರೆ.

ಮೂರ್ನಾಲ್ಕು ದಿನಗಳಿಂದ ಪಟ್ಟಣದ ಅಲ್ಲಲ್ಲಿ ಕಾಣಿಸಿಕೊಂಡ ಚಿರತೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು. ಗುರುವಾರ ಸಂಜೆ ಕೂಡ ಕಾಲೇಜು ಬಳಿ ಮತ್ತೆ ಕಾಣಿಸಿಕೊಂಡಿರುವುದು ಗಮನಕ್ಕೆ ಬರುತ್ತಿದ್ದಂತೆ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ರಾತ್ರಿ ಸುಮಾರು 10ಗಂಟೆಯವರೆಗೂ ಕಾಲೇಜು ಸುತ್ತ ಜಾಲಾಡಿದ್ದಾರೆ. ಚಿರತೆ ಬಗ್ಗೆ ಸುಳಿವು ಸಿಗದೇ ಇರುವುದರಿಂದ ಇದೊಂದು ಹುಸಿ ಹೇಳಿಕೆಯಾಗಿರಬಹುದು ಎಂದು ಸುಮ್ಮನಾಗಿದ್ದರು.

ADVERTISEMENT

ಪಟ್ಟಣದ ಮುಳ್ಳೂರು ರಸ್ತೆಯಲ್ಲಿನ ರಾಜ್ ಪ್ರಕಾಶ್ ಶಾಲೆ ಬಳಿ ಶುಕ್ರವಾರ ಬೆಳಿಗ್ಗೆ ಸುಮಾರು 8ಗಂಟೆಯಲ್ಲಿ ಕಾಣಿಸಿಕೊಂಡ ಚಿರತೆ, ಪಟ್ಟಣದ ಕನಕನಗರ ನಿವಾಸಿಗಳ ಮೇಲೆ ಎಗರಿ ಗಾಯಗೊಳಿಸಿದೆ. ಚಿರತೆ ಹಿಡಿಯಲು ಬಂದಿದ್ದ ಅರಣ್ಯಾಧಿಕಾರಿಗಳಿಗೆ ದಾಳಿ ಮಾಡಿ ಗಾಯಗೊಳಿಸಿ, ಪೊದೆಯಲ್ಲಿ 3-4 ಗಂಟೆ ಅವಿತು ಕುಳಿತುಕೊಂಡಿತ್ತು.

ಸಾರ್ವಜನಿಕರ ಸಹಕಾರದಿಂದ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು. ಅರಿವಳಿಕೆ ಚುಚ್ಚುಮದ್ದು ಶೂಟ್ ಮಾಡಿ, ಬಲೆ ಹಾಕಿ ಸೆರೆ ಹಿಡಿಯಲಾಗಿದೆ. ಸೆರೆ ಹಿಡಿಯಲಾದ ಚಿರತೆಯನ್ನು ಬಂಡಿಪುರ ಕಾಡಿಗೆ ಬಿಡಲಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ರಶ್ಮಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪಟ್ಟಣದಲ್ಲಿನ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜೆಎಸ್ಎಸ್ ಪ್ರೌಢಶಾಲೆ ಮತ್ತು ರಾಜ್ ಪ್ರಕಾಶ್ ಶಾಲೆಗಳಿಗೆ ರಜೆ ನೀಡಲಾಗಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.