ಮೈಸೂರು: ಇಲ್ಲಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಸೆ.22ರಂದು ಸಂಜೆ 5ಕ್ಕೆ ನಡೆಯಲಿರುವ ‘ಸಿ.ಎಂ. ಕಪ್’ ರಾಜ್ಯಮಟ್ಟದ ದಸರಾ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಒಲಿಂಪಿಯನ್ ಕುಸ್ತಿಪಟು ವಿನೇಶಾ ಫೋಗಟ್ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ವಿನೇಶಾ ಮೂರು ಒಲಿಂಪಿಕ್ಸ್‌ನಲ್ಲಿ ಕುಸ್ತಿಯಲ್ಲಿ ಭಾರತವನ್ನು ಪ್ರತಿನಿಧಿಸಿದವರು. ಏಷ್ಯನ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದವರು. 2024ರ ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆ.ಜಿ. ವಿಭಾಗದಲ್ಲಿ ಫೈನಲ್ಸ್ ಪ್ರವೇಶಿಸಿದ್ದ ಅವರು ನಿಗದಿಗಿಂತ ಕೊಂಚ ಹೆಚ್ಚು ದೇಹತೂಕದ ಕಾರಣಕ್ಕೆ ಟೂರ್ನಿಯಿಂದ ಹೊರಬಿದ್ದು, ಕುಸ್ತಿಗೆ ನಿವೃತ್ತಿ ಘೋಷಿಸಿದರು.
2024ರ ಅಕ್ಟೋಬರ್‌ನಲ್ಲಿ ಹರಿಯಾಣದ ಜುಲಾನ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.