
ಪ್ರಾತಿನಿಧಿಕ ಪತ್ರ
ಮೈಸೂರು: ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2025-26ನೇ ಸಾಲಿನಲ್ಲಿ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಮಂಡಳಿಯಿಂದ ನೇರವಾಗಿ ಸಾಲ, ಸಹಾಯಧನ ಮಂಜೂರು ಮಾಡಲಾಗುವುದು. ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ಸಣ್ಣ ಉದ್ಯಮ ಕೈಗೊಳ್ಳಲು ಕನಿಷ್ಠ ₹1 ಲಕ್ಷ ಘಟಕ ವೆಚ್ಚಕ್ಕೆ ₹20ಸಾವಿರ ಸಹಾಯಧನ ಹಾಗೂ ಗರಿಷ್ಠ ₹2 ಲಕ್ಷ ಘಟಕ ವೆಚ್ಚಕ್ಕೆ ₹40ಸಾವಿರ ಸಹಾಯಧನ ದೊರೆಯಲಿದೆ. ಉಳಿಕೆ ಸಾಲದ ಮೊತ್ತಕ್ಕೆ ಶೇ.4ರಂತೆ ವಾರ್ಷಿಕ ಬಡ್ಡಿ ವಿಧಿಸಲಾಗುತ್ತದೆ.
ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಮಹಿಳೆಯರಿಗೆ ಶೇ33, ಅಂಗವಿಕಲರಿಗೆ ಶೇ 5ರಷ್ಟು ಮೀಸಲಾತಿ ಸಿಗಲಿದೆ.
ಅರ್ಜಿಯನ್ನು www.ksbdb.karnataka.gov.in ಜಾಲತಾಣದಲ್ಲಿ ಪಡೆದು, ಅ. 31ರ ಒಳಗೆ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇಡಬ್ಲ್ಯುಎಸ್), ಆಧಾರ್ ಕಾರ್ಡ್ ಮೊದಲಾದ ದಾಖಲೆಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 88616 46939 ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಕೆ.ನಾರಾಯಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.