ADVERTISEMENT

ಮತದಾರರರ ಪಟ್ಟಿ ಶುದ್ಧೀಕರಣ; ಪ್ರಬಂಧ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2025, 2:37 IST
Last Updated 13 ಡಿಸೆಂಬರ್ 2025, 2:37 IST
ನಂಜನಗೂಡಿನ ಜೂನಿಯರ್ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಮತದಾರರಿಗೆ ಶಿಕ್ಷಣ ನೀಡುವಲ್ಲಿ ಹಾಗೂ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಪಾತ್ರ’ ಎಂಬ ವಿಷಯ ಕುರಿತ ಪ್ರಬಂಧ ಸ್ಪರ್ಧೆಯನ್ನು ಜೂನಿಯರ್ ಕಾಲೇಜಿನ ಪ್ರಾಂಶುಪಾಲ ಆರ್.ದಿನೇಶ್ ಉದ್ಘಾಟಿದರು
ನಂಜನಗೂಡಿನ ಜೂನಿಯರ್ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಮತದಾರರಿಗೆ ಶಿಕ್ಷಣ ನೀಡುವಲ್ಲಿ ಹಾಗೂ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಪಾತ್ರ’ ಎಂಬ ವಿಷಯ ಕುರಿತ ಪ್ರಬಂಧ ಸ್ಪರ್ಧೆಯನ್ನು ಜೂನಿಯರ್ ಕಾಲೇಜಿನ ಪ್ರಾಂಶುಪಾಲ ಆರ್.ದಿನೇಶ್ ಉದ್ಘಾಟಿದರು   

ನಂಜನಗೂಡು: ಮತದಾರರ ಪಟ್ಟಿ ನಿಖರವಾಗಿರುವುದು ಪ್ರಜಾಪ್ರಭುತ್ವದ ಶುದ್ಧತೆಯನ್ನು ಕಾಪಾಡುವ ಪ್ರಮುಖ ಹಂತ ಎಂದು ಜೂನಿಯರ್ ಕಾಲೇಜಿನ ಪ್ರಾಂಶುಪಾಲ ಆರ್.ದಿನೇಶ್ ಹೇಳಿದರು.

ನಗರದ ಜೂನಿಯರ್ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಮತದಾರರಿಗೆ ಶಿಕ್ಷಣ ನೀಡುವಲ್ಲಿ ಹಾಗೂ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಪಾತ್ರ’ ಎಂಬ ವಿಷಯದ ಮೇಲಿನ ಪ್ರಬಂಧ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮತಗಟ್ಟೆ ಅಧಿಕಾರಿಗಳು ನಿಷ್ಠೆಯಿಂದ ತಳಮಟ್ಟದಲ್ಲಿ ದುಡಿಯುತ್ತಾರೆ. ವಿದ್ಯಾರ್ಥಿಗಳು ಇವರ ಕಾರ್ಯವನ್ನು ಅರ್ಥಮಾಡಿಕೊಳ್ಳಬೇಕು, ಮತದಾರರ ಪಟ್ಟಿ ನಿಖರವಾಗಿರುವುದು ಪ್ರಜಾಪ್ರಭುತ್ವದ ಶುದ್ಧತೆಯನ್ನು ಕಾಪಾಡುವುದರಿಂದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಜವಾಬ್ದಾರಿಯುತ ಮತದಾರರಾಗಿ ರೂಪಗೊಳ್ಳಬಹುದು ಎಂದು ಹೇಳಿದರು.

ADVERTISEMENT

ಬಾಲಕಿಯರ ಸರ್ಕಾರಿ ಪದವಿ ಪೂರ್ವಕಾಲೇಜಿನ ಉಪನ್ಯಾಸಕ ರಾಘವೇಂದ್ರ ಮಾತನಾಡಿ, ಮತದಾನ ಪಟ್ಟಿ ಶುದ್ಧೀಕರಣ, ಮನೆಮನೆಗೆ ಸರ್ವೆ, ಹೊಸ ಮತದಾರ ನೋಂದಣಿ, ನಕಲು ಹೆಸರುಗಳು ಮತ್ತು ಮೃತರ ಹೆಸರುಗಳ ತಿದ್ದುಪಡಿ—ಇವೆಲ್ಲ ಚುನಾವಣೆ ಸುಗಮವಾಗಿ ನಡೆಯಲು ಅಗತ್ಯವಾದ ಅಂಶಗಳು. ಜನರಿಗೆ ಚುನಾವಣೆ ಜಾಗೃತಿ ನೀಡುವುದು ಸಹ ಮತಗಟ್ಟೆ ಅಧಿಕಾರಿಗಳ ಮಹತ್ವದ ಹೊಣೆಗಾರಿಕೆ ಎಂದು ಹೇಳಿದರು.

ಪ್ರಬಂಧ ಸ್ಪರ್ಧೆಯ ವಿಷಯವನ್ನು ವಿದ್ಯಾರ್ಥಿಗಳಿಗೆ ಇನ್ನಷ್ಟು ಮನದಾಳಕ್ಕೆ ತಲುಪುವಂತೆ ಮಾಡುವ ವಿಧಾನವನ್ನು ಈ ಕಾರ್ಯಕ್ರಮದ ಸಂಯೋಜಕರಾದ ಎಚ್.ಕೆ.ಸ್ವಾಮಿ ಗೌಡರ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಲಿಂಗಣ್ಣ ಸ್ವಾಮಿ, ಹೇಮಕುಮಾರ್, ಡಾ. ಬಿ.ಜೆ. ಗೋಪಾಲಕೃಷ್ಣ, ಶ್ರೀಧರ್, ಸೌಮ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.