ADVERTISEMENT

ಯಾವುದೇ ಸಮಯದಲ್ಲಿ ನೀರು ಬಿಡುಗಡೆ: ಕಬಿನಿ ಸುತ್ತಲಿನ ಗ್ರಾಮಸ್ಥರಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 9:06 IST
Last Updated 7 ಜುಲೈ 2022, 9:06 IST

ಮೈಸೂರು: ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದೆ.

ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡಲಾಗುವುದು. ಆದ್ದರಿಂದ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಜನರು ತಮ್ಮ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಳ್ಳಬೇಕು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಕರ್ನಾಟಕ ನೀರಾವರಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT